ಶಿರ್ವ: ಕಟಪಾಡಿ ಎಸ್ವಿಎಸ್ ಪದವಿಪೂರ್ವ ಕಾಲೇಜು ಹಳೆವಿದ್ಯಾರ್ಥಿ ಸಂಘದ 62ನೇ ವಾರ್ಷಿಕೋತ್ಸವ ನಡೆಯಿತು.

ಎಸ್ವಿಎಸ್ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಕೆ. ಸತ್ಯೇಂದ್ರ ಪೈ ಮಾತನಾಡಿ, ‘ಹಳೆವಿದ್ಯಾರ್ಥಿ ಸಂಘ ಶಾಲಾ ವಿದ್ಯಾರ್ಥಿಗಳಿಗೆ ಹಿಂದಿನಿಂದಲೂ ಅನೇಕ ಕೊಡುಗೆಗಳನ್ನು ನೀಡಿ ಪ್ರೋತ್ಸಾಹಿಸುತ್ತಾ ಬಂದಿದೆ. ಮುಂದೆಯೂ ನಾವೆಲ್ಲರೂ ಒಟ್ಟಾಗಿ ಶಾಲೆ, ಸಮಾಜಕ್ಕಾಗಿ ಕೆಲಸ ಮಾಡೋಣ’ ಎಂದರು.

ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೇಮ್ ಕುಮಾರ್, ಕಾಲೇಜಿನ ಹಾಗೂ ಸಂಘದ ವಾರ್ಷಿಕೋತ್ಸವವನ್ನು ಒಟ್ಟಿಗೆ ಆಚರಿಸಲು, ಸಂಘದ ಕಾರ್ಯಾಲಯಕ್ಕೆ ಸ್ಥಳಾವಕಾಶ ಒದಗಿಲು ಆಡಳಿತ ಮಂಡಳಿ ಸಹಕರಿಸಬೇಕು ಎಂದರು.

ಒಮಾನ್ ವಾಯುಪಡೆಯ ನಿವೃತ್ತ ಕ್ಯಾಪ್ಟನ್ ಗೋಪಾಲಕೃಷ್ಣ, ಉದ್ಯಮಿ ಜಿತೇಂದ್ರ ಶೆಟ್ಟಿ ಉದ್ಯಾವರ, ಎಸ್ಪಿಎಸ್ ಪಿಯು ಕಾಲೇಜು ಪ್ರಾಂಶುಪಲ ಕೆ. ದಯಾನಂದ ಪೈ ಮಾತನಾಡಿದರು. ಹಳೆವಿದ್ಯಾರ್ಥಿ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಲಾಯಿತು. ನಿವೃತ್ತ ಉಪನ್ಯಾಸಕ ಭಾಸ್ಕರ್ ಕಾಮತ್, ನಿವೃತ್ತ ಮುಖ್ಯಶಿಕ್ಷಕಿ ಜಯಲಕ್ಷ್ಮೀ ಶಾನುಭಾಗ್, ಶಿಕ್ಷಕಿ ವಿಜಯಾ, ಸಂಘದ ನಿರ್ಗಮಿತ ಕಾರ್ಯದರ್ಶಿ ರಾಘವೇಂದ್ರ ರಾವ್ ಅವರನ್ನು ಸನ್ಮಾನಿಸಲಾಯಿತು. ಸನ್ಮಾನಿತರ ಪರವಾಗಿ ಉಪನ್ಯಾಸಕ ಭಾಸ್ಕರ್ ಕಾಮತ್ ಮಾತನಾಡಿದರು.

ಪ್ರೇಮ್ ಕುಮಾರ್ ಸ್ವಾಗತಿಸಿದರು. ಕಾರ್ಯದರ್ಶಿ ರಾಘವೇಂದ್ರ ರಾವ್ ವರದಿ ವಾಚಿಸಿದರು. ಕಲಾ ಕಾರ್ಯದರ್ಶಿ ಪ್ರಶಾಂತ್ ಆರ್.ಎಸ್. ಬಹುಮಾನಿತರ ಪಟ್ಟಿ ವಾಚಿಸಿದರು. ಸಂಘದ ನಿಯೋಜಿತ ಕಾರ್ಯದರ್ಶಿ ಪ್ರಭಾ ಬಿ. ಶೆಟ್ಟಿ ವಂದಿಸಿದರು. ಜತೆ ಕಾರ್ಯದರ್ಶಿ ಎನ್.ಜಿ. ಸುಕುಮಾರ್ ನಿರೂಪಿಸಿದರು. ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಹಳೆ ವಿದ್ಯಾರ್ಥಿಗಳು ಮತ್ತು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ನಾಗರಾಜ್ ವರ್ಕಾಡಿ ವಿರಚಿತ ‘ತಪ್ಪು ಎನ್ನಡೆ’ ತುಳು ಹಾಸ್ಯನಾಟಕ ಪ್ರದರ್ಶನಗೊಂಡಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-28-65839091

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.