ಕೆರೂರ: ‘ಪ್ರಸಕ್ತ ಸಾಲಿನಿಂದ ಸರ್ಕಾರಿ ಶಾಲೆಗಳಲ್ಲಿಯೂ ದ್ವಿಭಾಷಾ ಮಾಧ್ಯಮ ಕಲಿಕೆ ಆರಂಭವಾಗಲಿದ್ದು, ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕೆ ಶಿಕ್ಷಕರು ಶ್ರಮಿಸಬೇಕು’ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ. ದೊಡ್ಡಪ್ಪನ್ನವರ ಅವರು ಶಿಕ್ಷಕರಿಗೆ ಸಲಹೆ ನೀಡಿದರು.

ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕೆರೂರ ವಲಯದ ಶಾಲೆಯ ಶಿಕ್ಷಕರು ದ್ವಿಭಾಷಾ ಮಾಧ್ಯಮ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಹೆಚ್ಚಿನ ಶೈಕ್ಷಣಿಕ ಸೌಲಭ್ಯ ಹೊಂದಿದೆ. ಇದನ್ನು ವಿದ್ಯಾರ್ಥಿಪೋಷಕರಿಗೆ ಮನವರಿಕೆ ಮಾಡಿ, ಮಕ್ಕಳನ್ನು ಸರ್ಕಾರಿ ಶಾಲೆಗೇ ದಾಖಲಿ ಸಲು ತಿಳಿಸಬೇಕು’ ಎಂದು ಹೇಳಿದರು.

ನೋಡಲ್ ಅಧಿಕಾರಿ ಜೆ.ಎ.ಶೇಖ್ ಮಾತನಾಡಿದರು. ಎಚ್.ಬಿ. ಗುಣ್ಣನ್ನವರ ಸ್ವಾಗತಿಸಿದರು, ವಿಜಯಕುಮಾರ್ ಹಿರೇಮಠ ಪ್ರಾರ್ಥಿಸಿದರು, ಶಾರದಾ ಹುಲ್ಯಾಳ ನಿರೂಪಿಸಿ, ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-19-526723769

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.