ಕೆಜಿಎಫ್: ಸರ್ಕಾರಿ ಶಾಲೆಗಳಲ್ಲಿ ಸಿಗುವ ಪ್ರಯೋಜನಗಳನ್ನು ಸಾರ್ವಜನಿಕರಿಗೆ ವಿವರಿಸಿ, ದಾಖಲಾತಿ ಮಾಡುವಂತೆ ಪ್ರೇರೇಪಿಸಲು ಶಾಲಾ ಶಿಕ್ಷಣ ಇಲಾಖೆಯಿಂದ ಶನಿವಾರ ಆಂಡರಸನ್ಪೇಟೆ ಸುತ್ತಮುತ್ತ ದಾಖಲಾತಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.

ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ.ನಾರಾಯಣಸ್ವಾಮಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಸರ್ಕಾರ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತಿದೆ. ಇಂಗ್ಲಿಷ್ ಕಲಿಕೆಗೆ ಒತ್ತು ನೀಡಲು ಈ ಬಾರಿಯಿಂದ ದ್ವಿಭಾಷಾ ಮಾಧ್ಯಮವನ್ನು ಪ್ರಾರಂಭಿಸಲಾಗಿದೆ. ನುರಿತ ಶಿಕ್ಷಕರು, ಉತ್ತಮ ವಾತಾವರಣದಲ್ಲಿ ಶಿಕ್ಷಣ ಪಡೆಯಲು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಎಂದು ಮನವಿ ಮಾಡಿದರು.

ಗೋಣಮಾಕನಹಳ್ಳಿ, ಗೊಲ್ಲಹಳ್ಳಿ, ಭಾರತೀಪುರಂ, ಸೂಸೈಪಾಳ್ಯ ಪ್ರದೇಶಗಳಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು.

ಮುಖ್ಯ ಶಿಕ್ಷಕರಾದ ಸೈದಾಬಿ, ಜಯಶಾಂತಿ, ನಾಗಮ್ಮ, ಶಂಕರ್, ವಿವಿಧ ಶಾಲೆಗಳ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ಅಡುಗೆ ಸಿಬ್ಬಂದಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-18-197623105

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.