ಖಾನಾಪುರ: ಪಟ್ಟಣದ ಶಾಸಕರ ಮಾದರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ಮತ್ತು ತಾಲ್ಲೂಕಿನ ಗುಂಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯಲ್ಲಿ ಇದೇ ಶೈಕ್ಷಣಿಕ ವರ್ಷದಿಂದ ಆರಂಭಗೊಳ್ಳುತ್ತಿರುವ ಕರ್ನಾಟಕ ಪಬ್ಲಿಕ್ ಶಾಲೆ ಲೋಕಾರ್ಪಣೆ ಮತ್ತು ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಮಾಧ್ಯಮದೊಂದಿಗೆ ಮರಾಠಿ ಮಾಧ್ಯಮದ ಉದ್ಘಾಟನೆ ಸಮಾರಂಭ ಜೂನ್ 1ರಂದು ನೆರವೇರಲಿದೆ ಎಂದು ಬಿಇಒ ಪಿ. ರಾಮಪ್ಪ ಹೇಳಿದರು.

ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಾಸಕ ವಿಠ್ಠಲ ಹಲಗೇಕರ ಬೆಳಿಗ್ಗೆ 10ಕ್ಕೆ ಖಾನಾಪುರ ಕೆಪಿಎಸ್ ಶಾಲೆ ಉದ್ಘಾಟಿಸಲಿದ್ದಾರೆ. 11ಗಂಟೆಗೆ ಸರ್ಕಾರಿ ಪ್ರೌಢಶಾಲೆಯಲ್ಲಿ ಮರಾಠಿ ಮಾಧ್ಯಮ ಬೋಧನೆಗೆ ಚಾಲನೆ ನೀಡಲಿದ್ದು, ಮಧ್ಯಾಹ್ನ 12ಕ್ಕೆ ಗುಂಜಿ ಕೆಪಿಎಸ್ ಶಾಲೆ ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ತಿಳಿಸಿದರು.

ಶಾಲೆ ಶಿಕ್ಷಣ ಇಲಾಖೆಯಿಂದ ಇದೇ ಶೈಕ್ಷಣಿಕ ವರ್ಷದಿಂದ ತಾಲ್ಲೂಕಿನ ಗಡಿಭಾಗದ ಮೂರು ಕನ್ನಡ ಶಾಲೆಗಳನ್ನು ಉನ್ನತೀಕರಿಸಲು ಅನುಮತಿ ದೊರೆತಿದ್ದು, ಐದು ಹೊಸ ಕನ್ನಡ ಮಾಧ್ಯಮ ಶಾಲೆಗಳ ಆರಂಭಕ್ಕೆ ಅನುಮೋದನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಅಶೋಕನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಮತ್ತು ಜಾಂಬೋಟಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಗಳಲ್ಲಿ 9ನೇ ತರಗತಿಗಳನ್ನು ಆರಂಭಿಸಲಾಗುತ್ತಿದ್ದು, ಶಿರೋಲಿ ಗ್ರಾಪಂ ವ್ಯಾಪ್ತಿಯ ಮಾಂಗಿನಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊಸದಾಗಿ 8ನೇ ತರಗತಿ ಪ್ರಾರಂಭಿಸಲಾಗುತ್ತಿದೆ. ತಾಲ್ಲೂಕಿನ ಬಿದರಬಾವಿ, ಕಾಟಗಾಳಿ, ರಾಜವಾಳ ಗೌಳಿವಾಡಾ, ಶಿರೋಲಿವಾಡಾ, ಹಣಬರವಾಡಾ ಗ್ರಾಮಗಳಲ್ಲಿ ಹೊಸದಾಗಿ 1 ರಿಂದ 5ನೇ ತರಗತಿ ವರೆಗಿನ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.

ಮಂಜುನಾಥ ಹತ್ತಿ, ವಿನಾಯಕ ಜಕಾತಿ, ಶಂಕರ ಕಮ್ಮಾರ, ಬಸವರಾಜ ಜನಕಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-21-726733268

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.