ಚನ್ನಮ್ಮನ ಕಿತ್ತೂರು: ಕೋಟೆ ಆವರಣದಲ್ಲಿ ಪುರಾತತ್ವ ಸಂಗ್ರಹಾಲಯ, ಪರಂಪರೆ ಇಲಾಖೆ ಹಾಗೂ ಕಸಾಪ ಕಿತ್ತೂರು ತಾಲ್ಲೂಕು ಘಟಕದ ಸಂಯುಕ್ತ ಆಶ್ರಯದಲ್ಲಿ ಮೇ 18 ರಂದು ಮುಂಜಾನೆ 10 ಗಂಟೆಗೆ ಅಂತರರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆ ಹಾಗೂ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕ್ಯುರೇಟರ್ ರಾಘವೇಂದ್ರ ಮತ್ತು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಸ್. ಬಿ. ದಳವಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಾಸಕ ಬಾಬಾಸಾಹೇಬ ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ‘ವಿಭಜಿತ ಜಗತ್ತನ್ನು ಒಂದುಗೂಡಿಸುವ ವಸ್ತುಸಂಗ್ರಹಾಲಯ’ ವಿಷಯವಾಗಿ ಬೆಳಗಾವಿ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಸದಾಶಿವ ಮುಗಳಿ ಉಪನ್ಯಾಸ ನೀಡುವರು. ರಾಜಗುರು ಸಂಸ್ಥಾನ ಕಲ್ಮಠದ ಪೀಠಾಧಿಕಾರಿ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದರು.

ತಹಶೀಲ್ದಾರ್ ಕಲಗೌಡ ಪಾಟೀಲ, ಸಿಪಿಐ ಶಿವಾನಂದ ಗುಡಗನಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಚನಬಸಪ್ಪ ತುಬಾಕಿ, ಸಮನ್ವಯಾಧಿಕಾರಿ ಗಾಯತ್ರಿ ಅಜ್ಜನ್ನವರ ಭಾಗವಹಿಸಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-21-2033633529

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.