ಮಡಿಕೇರಿ: ಉಮ್ಮತ್ಒನ್ ಕೊಡಗು ಚಾರಿಟಬಲ್ ಟ್ರಸ್ಟ್ನಿಂದ ಇಲ್ಲಿನ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ಮಂಗಳವಾರ ನಡೆದ ಶಿಕ್ಷಣ ಮೇಳ, ಪ್ರತಿಭಾ ಪುರಸ್ಕಾರದಲ್ಲಿ ಜಿಲ್ಲೆಯ 200 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹಧನ ವಿತರಿಸಲಾಯಿತು.

10ನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದು ಸಾಧನೆ ತೋರಿದ ಜಿಲ್ಲೆಯ ಐವರು ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಪ್ರೋತ್ಸಾಹ ಧನ ವಿತರಿಸಲಾಯಿತು. 10ನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ 100 ಫಲಿತಾಂಶ ಪಡೆದ ಜಿಲ್ಲೆಯ 47 ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ, ಕಾಲೇಜುಗಳ ಪ್ರಾಂಶುಪಾಲರನ್ನು ಗೌರವಿಸಲಾಯಿತು.

ಪುಣೆಯ ಅನೀಸ್ ಡಿಫೆನ್ಸ್ ಕೆರಿಯರ್ ಇನ್ಸ್ಟಿಟ್ಯೂಟ್ ಸಂಸ್ಥಾಪಕ ಅನೀಸ್ ಕುಟ್ಟಿ ಹಾಗೂ ವೃತ್ತಿ ಮಾರ್ಗದರ್ಶಕ ರಫೀಕ್ ಮಾಸ್ಟರ್ ಶೈಕ್ಷಣಿಕ ವಲಯದಲ್ಲಿರುವ ಅವಕಾಶ, ವಿವಿಧ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೇರ್ಪಡೆಯಾಗುವ ಬಗೆ, ವೃತ್ತಿ ಶಿಕ್ಷಣ, ಸರ್ಕಾರದ ಸೌಲಭ್ಯಗಳು, ಉದ್ಯೋಗಾವಕಾಶ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಾರ್ಗದರ್ಶನ ನೀಡಿದರು.

ನ್ಯಾಯಾಧೀಶರಾದ ಸೈಯದಾ ಕಾಶ್ಮೀರ ಸಿಮ್ರಾನ್ ಮಾತನಾಡಿ, ‘ಪ್ರಪಂಚದ ಯಾವುದೇ ಮೂಲೆಯಲ್ಲಿಯೂ ಬದುಕು ಕಟ್ಟಿಕೊಳ್ಳಲು ಶಿಕ್ಷಣದಿಂದ ಮಾತ್ರವೇ ಸಾಧ್ಯ. ಅದರಲ್ಲೂ ಹೆಣ್ಣಿಗೆ ಶಿಕ್ಷಣವೇ ಅತೀ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಮನವರಿಕೆ ಮಾಡಿಕೊಳ್ಳಬೇಕು’ ಎಂದರು.

ಕೊಡ್ಲಿಪೇಟೆಯ ಎಪಿಜೆ ಅಬ್ದುಲ್ ಕಲಾಂ ಶಾಲೆಯ ಪ್ರಾಂಶುಪಾಲ ಗುರುಸ್ವಾಮಿಮಾತನಾಡಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಮೂಲಕ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸರ್ಕಾರ ನೆರವು ಒದಗಿಸುತ್ತಿದ್ದು, ಸದುಪಯೋಗ ಪಡಿಸಿ ಎಂದು ಹೇಳಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಶಾಲೆ, ಕಾಲೇಜುಗಳಲ್ಲಿ ಬಡ ಮಕ್ಕಳಿಗೆ ಉಚಿತ ಇಂಗ್ಲಿಷ್ ಮಾಧ್ಯಮ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಲಾಗಿದೆ. ಸಿಬಿಎಸ್ಸಿ ಶಿಕ್ಷಣವನ್ನು ಕೂಡ ಜಾರಿಗೆ ತರಲಾಗಿದೆ. ಕುಶಾಲನಗರದಲ್ಲೂ ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ಮಹಿಳಾ ಕಾಲೇಜು ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.

ನ್ಯಾಯಾಧೀಶರಾದ ಸೈಯದಾ ಕಾಶ್ಮೀರ ಸಿಮ್ರಾನ್, ಉದ್ಯಮಿ ಸಿದ್ದಿಕ್ ಹಂಸ, ಸಿವಿಲ್ ಎಂಜಿನಿಯರ್ ಅಲ್ಫೀಯ ಹಾಗೂ ಪತ್ರಕರ್ತ ಇಸ್ಮಾಯಿಲ್ ಕಂಡಕರೆ ಅವರನ್ನು ಸನ್ಮಾನಿಸಲಾಯಿತು. ಉಮ್ಮತ್ ಒನ್ ಸಂಸ್ಥೆಯ ಮುಖಂಡರಾದ ಎಂ.ಎಂ.ಹಾರೂನ್, ಸಿಇಒ ತನ್ವೀರ್, ಅಬ್ದುಲ್ ಮಜೀದ್, ಖಾಲಿದ್ ಹಾಕತ್ತೂರು, ಅಬ್ದುಲ್ ಲತೀಫ್, ನಿಸಾರ್ ಅಹಮ್ಮದ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-51-1881188752

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.