ಗೋಣಿಕೊಪ್ಪಲು: ಪೊನ್ನಂಪೇಟೆ ತಾಲ್ಲೂಕಿನ ಬೇಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ, ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಮೂರು ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಮಂಡೆಪಂಡ ಸುಜಾ ಕುಶಾಲಪ್ಪ, ‘ಶಿಕ್ಷಣ ಪಡೆದರೆ ಮಾತ್ರ ದೇಶ ಅಭಿವೃದ್ಧಿ ಕಾಣಲು ಸಾಧ್ಯ. ಸರ್ಕಾರ ಶಾಲೆಗಳ ಉನ್ನತಿಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಕಲಿತ ಬಹುತೇಕ ವಿದ್ಯಾರ್ಥಿಗಳು ಇಂದು ದೇಶದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ’ ಎಂದರು.

ಮುಖ್ಯ ವಿದ್ಯುತ್ ಪರಿವೀಕ್ಷಕರಾದ ತೀತಿರ ರೋಷನ್ ಅಪ್ಪಚ್ಚು ಮಾತನಾಡಿ, ‘ಭಾರತೀಯ ಸೈನ್ಯ ಹಾಗೂ ಪೊಲೀಸ್ ಇಲಾಖೆಯಲ್ಲಿ ಹಿಂದೆ ಕೊಡಗಿನವರು ಹೆಚ್ಚಿನ ಸಂಖ್ಯೆಯಲ್ಲಿ ಇರುತ್ತಿದ್ದರು. ಈಗ ಕಡಿಮೆ ಆಗಿದೆ. ಪೋಷಕರು ತಮ್ಮ ಮಕ್ಕಳನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರು ಮಾಡಿ, ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಪ್ರಯತ್ನಿಸಬೇಕು’ ಎಂದರು.

ಕ್ಷೆತ್ರ ಸಂಪನ್ಮೂಲ ವ್ಯಕ್ತಿ ಕೆ.ಎಲ್.ರುಕ್ಮಿಣಿ ಮಾತನಾಡಿ, ‘ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬೇಗೂರು ಗ್ರಾಮಸ್ಥರು ಹಾಗೂ ಶಾಲೆಯ ಶಿಕ್ಷಕಿಯರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಬೇಗೂರು ಗ್ರಾಮ ವ್ಯಾಪ್ತಿಯ ಭಾರತೀಯ ಸೇನೆ ಯೋಧರು, ನಿವೃತ್ತ ಯೋಧರು ಹಾಗೂ ಶಾಲೆಯ ನವೀಕರಣಕ್ಕೆ ಸಹಾಯ ಮಾಡಿದ ದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಅಮೃತಧಾರೆ ಸ್ಮರಣೆ ಸಂಚಿಕೆಯನ್ನು ಅಥಿತಿಗಳು ಬಿಡುಗಡೆ ಮಾಡಿದರು. ಬೇಗೂರು ಶಾಲೆ ಮುಖ್ಯ ಶಿಕ್ಷಕಿ ಸುಜಾತ ಶಾಲಾ ವರದಿ ವಾಚಿಸಿದರು.

ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಕೇಚೆಟ್ಟೀರ ಅರುಣ್ ಅಪ್ಪಣ್ಣ ಅಧ್ಯಕ್ಷತೆ ವಹಿಸಿದ್ದರು.

ಎಸ್ಡಿಎಂಸಿ ಅಧ್ಯಕ್ಷೆ ಪಿ.ಎಂ.ಕಾವೇರಿ, ಕಿಗ್ಗಟ್ ನಾಡ್ ಹಿರಿಯ ನಾಗರೀಕ ವೇದಿಕೆ ಸ್ಥಾಪಕ ಕಾಟಿಮಾಡ ಜಿಮ್ಮಿ ಅಣ್ಣಯ್ಯ, ಅಮೃತ ಮಹೋತ್ಸವ ಸಮಿತಿಯ ಕಾರ್ಯದರ್ಶಿ ಮತ್ರಂಡ ರಾಜ ಮುತ್ತಪ್ಪ, ಉಪಾಧ್ಯಕ್ಷರಾದ ಕಾಯಪಂಡ ಕಂಠಿ ಕರುಂಬಯ್ಯ, ಕೇಚೆಟ್ಟಿರ ಲಲಿತ, ಬಿಆರ್ ಪಿ.ವಾಮನ, ಸಿಆರ್ ಪಿ ಕೋಪುಡ ಸೌಮ್ಯ, ಬೆಂಗಳೂರು ಕೊಡವ ಸಂಘದ ಅಧ್ಯಕ್ಷೆ ಬೆಂಜಂಡ ಸುಶೀಲ ಮಾಚಯ್ಯ, ಬೇಗೂರು ಶಾಲೆ ಸಹ ಶಿಕ್ಷಕಿಯರಾದ ಅನಿತ ಕುಮಾರಿ, ರಸೀನ, ಅಮೃತ ಮಹೋತ್ಸವ ಸಮಿತಿ ಸದಸ್ಯರು, ದಾನಿಗಳು, ವಿವಿಧ ಶಾಲೆಗಳ ಶಿಕ್ಷಕರು, ಹಾಗೂ ಬೇಗೂರು ಗ್ರಾಮಸ್ಥರು ಹಾಜರಿದ್ದರು.

ಸಂಜೆ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಿತು. ಅನ್ವಿತ್ ಕುಮಾರ್ ಬಾಳೆಲೆ ಹಾಗೂ ತನುಶ್ರೀ ಮಂಗಳೂರು ಅವರ ಗೀತಾ ಗಾಯನ ಕಾರ್ಯಕ್ರಮ ನೆರೆದಿದ್ದವರನ್ನು ರಂಜಿಸಿತು. ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-51-279843986

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.