ಮಡಿಕೇರಿ: ‘ಕೊಡಗು ಜಿಲ್ಲೆಗೆ ಪ್ರತ್ಯೇಕ ಸಾಂಸ್ಕೃತಿಕ ನೀತಿ ರೂಪಿಸಬೇಕು’ ಎಂದು ಸಾಹಿತಿ ಅಬ್ದುಲ್ ರಶೀದ್ ಶುಕ್ರವಾರ ಇಲ್ಲಿ ಒತ್ತಾಯಿಸಿದರು.

ಸುಂಟಿಕೊಪ್ಪದಲ್ಲಿ ನಡೆದ 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನದಿಂದ ಅವರು ಮಾತನಾಡಿದರು.

‘ಕೊಡಗಿನಲ್ಲಿ ಕನ್ನಡ ಉಳಿಸುವುದೆಂದರೆ ಇಲ್ಲಿನ ಕೊಡವ, ಅರೆಭಾಷೆ, ಜೇನುಕುರುಬ, ಮೇದ, ಬೆಟ್ಟಕುರುಬ, ಯರವ, ಅಡಿಯ, ಪಣಿಯ, ದೇವಸೋಲಿಗ, ಜೇನುಮಲೆ ಕುಡಿಯ, ಪೂಮಲೆ ಕುಡಿಯ ಇತ್ಯಾದಿ ಭಾಷೆಗಳನ್ನು ಉಳಿಸುವುದು ಎಂದರ್ಥ. ಇವುಗಳನ್ನು ಬಳಸುವ ಸಮುದಾಯದ ಮಕ್ಕಳಲ್ಲಿ ಈ ಭಾಷೆಗಳ ಕುರಿತ ಕುತೂಹಲ ಆಸಕ್ತಿ ಮತ್ತು ಹೆಮ್ಮೆಯನ್ನು ಮೂಡಿಸುವ ಕೆಲಸವಾಗಬೇಕು. ಆಶ್ರಮ ಶಾಲೆಗಳಲ್ಲಿ ಈ ಭಾಷೆಗಳ ಮಾಹಿತಿ, ಕಲಿಕೆ ಕೊಡಿಸಬೇಕು’ ಎಂದು ಒತ್ತಾಯಿಸಿದರು.

‘ಕೊಡಗು ಕೇಂದ್ರೀಕೃತವಾದ ಮಾದರಿ ಸೂತ್ರಗಳನ್ನು ನಿರೂಪಿಸಬೇಕು. ಕೊಡಗಿನಲ್ಲಿ ವಿಲಾಸಿ ಪ್ರವಾಸೋದ್ಯಮದ ನಿಯಂತ್ರಣಕ್ಕೂ ನೀತಿ ರೂಪಿಸಬೇಕು’ ಎಂದೂ ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-51-1335418086

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.