ಮಡಿಕೇರಿ: ಉನ್ನತ ಶಿಕ್ಷಣವನ್ನು ಪಡೆಯಬೇಕು, ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ತೊಡಗಿಸಿಕೊಂಡು ಸಾಧನೆ ಮಾಡುವುದರತ್ತ ವಿದ್ಯಾರ್ಥಿಗಳು ಗಮನ ಹರಿಸಬೇಕು ಎಂದು ಭಾರತೀಯ ಮಹಿಳಾ ಹಾಕಿ ತಂಡದ ತರಬೇತುದಾರರಾದ ಬಿ.ಎಸ್.ಅಂಕಿತಾ ತಿಳಿಸಿದರು.

ಇಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ಸೋಮವಾರ ನಡೆದ ಕ್ರೀಡೆ ಮತ್ತು ಪ್ರತಿಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಕ್ರೀಡೆಯಲ್ಲಿ ಪಾಲ್ಗೊಂಡು ಸಾಧನೆ ಮಾಡುವ ಮೂಲಕ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲೂ ವಿದ್ಯಾರ್ಥಿಗಳು ಕೀರ್ತಿ ಗಳಿಸಬೇಕು’ ಎಂದರು. ಕ್ರೀಡೆಯಲ್ಲಿ ತೊಡಗಿಸಿಕೊಂಡೇ ಹೆಚ್ಚು ಹೆಚ್ಚು ಓದಬಹುದು. ಈ ಬಗ್ಗೆ ವಿದ್ಯಾರ್ಥಿಗಳು ಗಮನ ಹರಿಸಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ.ಬಿ.ರಾಘವ ಮಾತನಾಡಿ, ‘ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಜೀವನದಲ್ಲಿ ಸಾರ್ಥಕತೆಯನ್ನು ಕಂಡುಕೊಳ್ಳಬೇಕು. ವಿದ್ಯಾರ್ಥಿ ಜೀವನದ ಉತ್ತಮ ಸಾಧನೆ ತಂದೆ, ತಾಯಿ, ಬಂಧು ಬಳಗದಲ್ಲಿ ಖುಷಿಯನ್ನು ತಂದು ಕೊಡುತ್ತದೆ. ಇದನ್ನು ಸಮಾಜ ಸದಾ ನೆನಪಿಸಿಕೊಳ್ಳುತ್ತದೆ’ ಎಂದು ತಿಳಿಸಿದರು.

ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತ್ತಿರಬೇಕು ಮತ್ತು ಮಾದರಿಯಾಗಿರಬೇಕು ಎಂದು ಕಿವಿಮಾತು ಹೇಳಿದರು.

ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ‘ಕಾಲೇಜಿನ ಕ್ರೀಡೋತ್ಸವಗಳು ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಸಾಧನೆಗೆ ಮೊದಲ ಹೆಜ್ಜೆಯಾಗಿದೆ ಹಾಗೂ ವಿದ್ಯಾರ್ಥಿಗಳಲ್ಲಿ ಸ್ಫೂರ್ತಿಯನ್ನು ತುಂಬುತ್ತದೆ. ಗುರಿ, ಕನಸು ಮತ್ತು ಶಿಸ್ತು ಇದ್ದಾಗ ಮಾತ್ರ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಲಭಿಸಲು ಸಾಧ್ಯ’ ಎಂದರು.

ಭಾರತೀಯ ಮಹಿಳಾ ಹಾಕಿ ತಂಡದ ತರಬೇತುದಾರರಾದ ಬಿ.ಎಸ್.ಅಂಕಿತಾ, ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಹಾಗೂ ಸಮಾಜ ಸೇವಕ ಪ್ರಸನ್ನ ಭಟ್ ಅವರನ್ನು ಗೌರವಿಸಲಾಯಿತು. ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕೊಡಗು ವಿಶ್ವ ವಿದ್ಯಾನಿಲಯದ ಪರೀಕ್ಷಾಂಗ ವಿಭಾಗದ ವಿಶೇಷ ಅಧಿಕಾರಿ ಮೇಚಿರ ರವಿಶಂಕರ್ ನಾಣಯ್ಯ, ಸಹಪಠ್ಯ ಚಟುವಟಿಕೆ ವಿಭಾಗದ ಸಂಚಾಲಕರಾದ ಡಾ.ಎಚ್.ಕೆ.ರೇಣು, ವಿದ್ಯಾರ್ಥಿ ಸಂಘದ ಸಲಹೆಗಾರ ಪ್ರೊ.ಶ್ರೀಧರ ಹೆಗಡೆ, ಕ್ರೀಡಾ ವಿಭಾಗದ ಸಂಯೋಜಕ ಡಾ.ಬಿ.ಎಚ್.ತಳವಾರ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-51-1975204995

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.