ಮಡಿಕೇರಿ:ಕೊಡಗು ಜಿಲ್ಲೆಯ ಮೊದಲ ಬ್ಯಾರಿ ಸಾಹಿತ್ಯ ಸಮ್ಮೇಳನವು ಏಪ್ರಿಲ್ 28ರಂದು ಮಡಿಕೇರಿಯ ಕಾವೇರಿ ಹಾಲ್ನಲ್ಲಿ ನಡೆಯಲಿದೆ.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಕೊಡಗು ಬ್ಯಾರೀಸ್ ವೆಲ್ ಫೇರ್ ಟ್ರಸ್ಟ್ನ ಸಹಯೋಗದೊಂದಿಗೆ ನಡೆಸುತ್ತಿರುವ ಈ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಸಾಹಿತಿ ಬಿ.ಎ. ಷಂಶುದ್ದೀನ್ ವಹಿಸಲಿದ್ದಾರೆ.

ಬೆಳಿಗ್ಗೆ 9.30ಕ್ಕೆ ಕ್ರೆಸೆಂಟ್ ಶಾಲೆಯಿಂದ ಕಾವೇರಿ ಹಾಲ್ ತನಕ ಸಮ್ಮೇಳನಾಧ್ಯಕ್ಷರ ಮರವಣಿಗೆ ನಡೆಯಲಿದ್ದು, ನಗರಸಭೆಯ ಸದಸ್ಯ ಅಮೀನ್ ಮೋಹಿನ್ ಉದ್ಘಾಟಿಸಲಿದ್ದಾರೆ. ಅಕಾಡೆಮಿಯ ಅಧ್ಯಕ್ಷ ಯು.ಎಚ್.ಉಮರ್ 10.15ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಬೆಳಿಗ್ಗೆ 10.30ಕ್ಕೆ ವಿಧಾನ ಪರಿಷತ್ನ ಮಾಜಿ ಸದಸ್ಯ ಬಿ.ಎಂ.ಫಾರೂಕ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2ರಿಂದ 3 ಗಂಟೆಯವರೆಗೆ ಸಮ್ಮೇಳನಾಧ್ಯಕ್ಷರ ಭಾಷಣದ ಮೇಲೆ ನಡೆಯಲಿರುವ ಚರ್ಚಾಗೋಷಿಯನ್ನು ಹಿರಿಯ ಪತ್ರಕರ್ತ ಬಿ.ಎಂ.ಹನೀಫ್ ನಿರೂಪಿಸಲಿದ್ದು, ಪತ್ರಕರ್ತ ಹಂಝ ಮಲಾರ್, ಶಾಹೀನ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ತೌಸೀಫ್ ಅಹ್ಮದ್ ಮಡಿಕೇರಿ, ವೈದ್ಯರಾದ ಆಫೀನ್ ಚರ್ಚಾಗೋಷ್ಠಿಯಲ್ಲಿ ಭಾಗವಹಿಸುವರು.

ಮಧ್ಯಾಹ್ನ 3ರಿಂದ 4ರವರೆಗೆ ಬ್ಯಾರಿ ಕವಿಗೋಷ್ಠಿ ನಡೆಯಲಿದ್ದು, ಸಂಜೆ 4.30ಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಸಮಾರೋಪ ಸಮಾರಂಭ ಉದ್ಘಾಟಿಸಲಿದ್ದು, 11 ಮಂದಿ ಸಾಧಕರಿಗೆ ಸನ್ಮಾನ ಮಾಡಲಿದ್ದಾರೆ.

ಈ ಮಧ್ಯೆ ದಫ್, ಒಪ್ಪನೆ ಪಾಟ್, ಕೋಲ್ಕಲಿ, ಬ್ಯಾರಿ ಹಾಡುಗಳ ಸಂಭ್ರಮ ಮತ್ತು ಬ್ಯಾರಿ ಪ್ರಹಸನಗಳೂ ನಡೆಯಲಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-51-1138646773

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.