ಕುಶಾಲನಗರ: ಕನ್ನಡ ಭಾಷೆಯನ್ನು ಗೌರವಿಸುವುದರೊಂದಿಗೆ ಈ ನಾಡಿನ ನೆಲ, ಜಲ ಸಂಸ್ಕೃತಿ ಪ್ರತಿಯೊಬ್ಬರ ಉಸಿರಾಗಬೇಕೆಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಅಶೋಕ್ ಸಂಗಪ್ಪ ಆಲೂರ ಹೇಳಿದರು.

ಪಟ್ಟಣದ ಅನುಗ್ರಹ ಪದವಿ ಕಾಲೇಜಿನಲ್ಲಿ ಸಾಹಿತ್ಯ ಹಾಗೂ ಸಾಂಸ್ಕೃತಿಕ ವೇದಿಕೆ ವತಿಯಿಂದ ದ್ವಿತೀಯ ಪಿಯುಸಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಕನ್ನಡ ಭಾಷೆಯನ್ನು ಮಾತನಾಡುವುದು ಹೆಮ್ಮೆಯ ಸಂಗತಿಯಾಗಬೇಕು. ಇತರೆ ಭಾಷೆಗಳನ್ನು ಗೌರವಿಸಬೇಕು. ಕನ್ನಡ ಈ ನೆಲದ ಅಸ್ಮಿತೆಯಾಗಿದೆ. ಕನ್ನಡದಲ್ಲಿ ಓದಿ ಪರಿಪೂರ್ಣವಾದ ಜೀವನ ನಡೆಸಿದ ಮಹನೀಯರು ನಮಗೆ ಆದರ್ಶರಾಗಬೇಕು ಎಂದರು.

ನಮ್ಮಲ್ಲಿನ ವಿದ್ವತ್ತನ್ನು ಬಳಸಲು ಕನ್ನಡ ಪ್ರೇರಕವಾಗಬೇಕು. ಶಿಕ್ಷಣ ಹೊಟ್ಟೆಪಾಡಿನ ಸಾಧನವಾಗದೇ ಸಮಾಜದಲ್ಲಿ ಉನ್ನತ ಸ್ಥಾನಮಾನವನ್ನು ಹೊಂದಲು ಸಹಕಾರಿ ಆಗಬೇಕು. ಸಮಾಜ, ಕುಟುಂಬ, ಪರಿಸರಕ್ಕೆ ಪೂರಕವಾಗುವ ಶಿಕ್ಷಣ ನಮ್ಮದಾಗಬೇಕು. ವಿದ್ಯಾರ್ಥಿಗಳಿಗೆ ವೈದ್ಯಕೀಯ, ಎಂಜಿನಿಯರಿಂಗ್ ಎರಡೇ ಆಯ್ಕೆಯಲ್ಲ. ಬಹಳಷ್ಟು ಉಪಯುಕ್ತ ಮಾಹಿತಿಗಳನ್ನು ಪಡೆದು ಸಾಧನೆ ತೋರಬೇಕೆಂದು ಸಲಹೆ ನೀಡಿದರು.

ಅನುಗ್ರಹ ಕಾಲೇಜಿನ ಧರ್ಮದರ್ಶಿ ಆರ್.ಕೆ.ನಾಗೇಂದ್ರ ಬಾಬು ಮಾತನಾಡಿ, ಕನ್ನಡ ಭಾಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ಮುಂದಿನ ಶಿಕ್ಷಣಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೂಕ್ತ ಧನಸಹಾಯದೊಂದಿಗೆ ಪ್ರೋತ್ಸಾಹಿಸುವ ಕೆಲಲವಾಗಬೇಕು ಎಂದರು.

ಸಾಧನೆ ತೋರಿದ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಆ ಮಕ್ಕಳನ್ನು ಮೆರವಣಿಗೆ ಮೂಲಕ ಸತ್ಕರಿಸುವ ಕೆಲಸ ಸಾಮೂಹಿಕವಾಗಿ ನಡೆಯಬೇಕಿದೆ. ಕನ್ನಡ ಭಾಷೆಯಲ್ಲಿ ಅನುತ್ತೀರ್ಣರಾಗುವ ಮಕ್ಕಳಿಗೆ ಹಾಗೂ ಆ ಶಾಲೆಗಳ ಶಿಕ್ಷಕರುಗಳಿಗೆ ಸರ್ಕಾರ ಸೂಕ್ತ ತರಬೇತಿ ಮಾರ್ಗದರ್ಶನ ನೀಡಬೇಕು. ಆದರೆ ಶಿಕ್ಷೆಯಿಲ್ಲದ ಶಿಕ್ಷಣದಿಂದಾಗಿ ಸಾಧಿಸುವ ಛಲ ವಿದ್ಯಾರ್ಥಿಗಳಲ್ಲಿ ಮಸುಕಾಗುತ್ತಿದೆ ಎಂದು ನಾಗೇಂದ್ರ ವಿಷಾದಿಸಿದರು.

ಕಾಲೇಜು ಪ್ರಾಂಶುಪಾಲೆ ಬಿ.ಡಿ.ಚೈತ್ರ ಮಾತನಾಡಿ, ಇಡೀ ವಿಶ್ವದಲ್ಲಿಯೇ ಅತ್ಯಂತ ಸುಂದರ ವಾಗಿರುವ ಕನ್ನಡ ಭಾಷೆಯನ್ನು ಬೆಳೆಸುವ ಹಾಗೂ ಗೌರವಿಸುವ ಜವಾಬ್ದಾರಿ ಇಂದಿನ ಯುವ ಜನಾಂಗದಿಂದ ಮೇಲಿದೆ ಎಂದರು.

ಸುಂಟಿಕೊಪ್ಪ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಮಾತನಾಡಿ, ಕನ್ನಡದಲ್ಲಿ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಗೌರವಿಸುವ ಕೆಲಸ ಕನ್ನಡ ಅಭಿಮಾನಿಗಳಿಗೆ ಹೆಮ್ಮೆಯ ಸಂಗತಿ ಎಂದರು.

ಸಾಹಿತ್ಯ ಹಾಗೂ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಕೆ.ಎಸ್.ಮೂರ್ತಿ ಮಾತನಾಡಿ, ಕನ್ನಡ ಭಾಷೆಯ ಮೇಲೆ ಯುವಕರಲ್ಲಿ ಸ್ವಾಭಿಮಾನ ಮೂಡಿಸಲು ಕನ್ನಡದಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಗುತ್ತಿದೆ ಎಂದರು. ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿ ದರ್ಶನ್ ಕನ್ನಡ ಗೀತೆಗಳನ್ನು ಹಾಡಿ ಗಮನ ಸೆಳೆದರು. ಈ ಸಂದರ್ಭ ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ, ಕಾಲೇಜಿನ ಟ್ರಸ್ಟಿಗಳಾದ ಶ್ಯಾಮಲಾ ನಾಗೇಂದ್ರ, ಚಂದ್ರಶೇಖರ್, ಸಾಹಿತ್ಯ ವೇದಿಕೆಯ ಕಾರ್ಯದರ್ಶಿ ಪಾಣತ್ತಲೆ ಗಿರೀಶ್, ಕಾಲೇಜಿನ ಉಪಪ್ರಾಂಶುಪಾಲೆ ಮೇಘನಾ, ಕನ್ನಡ ಭಾಷಾ ಉಪನ್ಯಾಸಕಿ ಲೀಲಾಕುಮಾರಿ ತೊಡಿಕಾನ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-51-1020011830

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.