ಮಡಿಕೇರಿ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯಿಂದ ಮಾರ್ಚ್ 31ರಂದು ಬೆಳಿಗ್ಗೆ 9 ಗಂಟೆಗೆ ಬೆಳ್ಳಾರೆಯ ಬಂಗ್ಲೆಗುಡ್ಡೆಯಲ್ಲಿ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡರ ಸಂಸ್ಮರಣಾ ದಿನಾಚರಣೆ ನಡೆಯಲಿದೆ.

‘ಕೆದಂಬಾಡಿ ರಾಮಯ್ಯ ಗೌಡರ ನೇತೃತ್ವದ ತಂಡ 1937ರ ಮಾರ್ಚ್ 31ರಂದು ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ಬೆಳ್ಳಾರೆಯಲ್ಲಿದ್ದ ಬ್ರಿಟಿಷರ ಖಜಾನೆ ವಶಪಡಿಸಿಕೊಂಡು ನಂತರದಲ್ಲಿ ಮಂಗಳೂರಿನತ್ತ ಸಾಗಿತ್ತು. ಇದರ ಸ್ಮರಣಾರ್ಥ ಅಕಾಡೆಮಿಯು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ’ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅವರು ತಿಳಿಸಿದ್ದಾರೆ.

ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕ ಪ್ರಸನ್ನ ನಿಡ್ಯಮಲೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-51-186800198

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.