ನಾಪೋಕ್ಲು: ‘ಕೊಡವ ಜನಪದ, ಸಂಸ್ಕೃತಿ, ಆಚಾರ, ವಿಚಾರ ಕಲೆ, ಪದ್ಧತಿ ಪರಂಪರೆಗಳು ಜನಮಾನಸದಿಂದ ಮರೆಯಾಗುತ್ತಿದ್ದು ಅವುಗಳನ್ನು ಉಳಿಸಿ ಬೆಳೆಸುವ ಅಗತ್ಯವಿದೆ’ ಎಂದು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಹೇಳಿದರು.

ಇಲ್ಲಿನ ಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ಕೊಡವ ಆಟ್ ಪಾಟ್ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ‘ಕೊಡವ ಜನಾಂಗದ ಸಂಸ್ಕೃತಿ, ಕಲೆ, ಪದ್ಧತಿಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಅಗತ್ಯವಿದೆ. ಕೊಡವ ಸಂಸ್ಕೃತಿ, ಪದ್ಧತಿ, ಪರಂಪರೆಗಳು ಕೇವಲ ಮಾತಿನಲ್ಲಿ ಉಳಿದಿವೆ. ಯುವ ಪೀಳಿಗೆ ಸಂಸ್ಕೃತಿ ಸಂಪ್ರದಾಯಗಳ ಆಚರಣೆಯಿಂದ ದೂರ ಉಳಿಯುತ್ತಿದ್ದಾರೆ. ಕೊಡವ ಪದ್ಧತಿ ಪರಂಪರೆಗಳ ಬಗ್ಗೆ ಅಪಾರಜ್ಞಾನವನ್ನು ಹೊಂದಿದ್ದ ಹಿರಿಯರು ಮರೆಯಾಗುತ್ತಿದ್ದಾರೆ. ಮುಂದಿನ ಪೀಳಿಗೆಗೆ ಸಂಸ್ಕೃತಿ, ಕಲೆ, ಸಂಪ್ರದಾಯಗಳನ್ನು ತಲುಪಿಸುವ ಉದ್ದೇಶದಿಂದ ಮೊಮ್ಮಕ್ಕಡ ಪರಿಷತ್ತು ಮತ್ತು ಚೇನಂಡ ಕುಟುಂಬದ ಸಹಯೋಗದೊಂದಿಗೆ ಆಟ್ ಪಾಟ್ ಶಿಬಿರವನ್ನು ಆಯೋಜಿಸಲಾಗುತ್ತಿದೆ. ಕೊಡವ ಜನಾಂಗದವರು ತಮ್ಮ ಮಕ್ಕಳನ್ನು ಶಿಬಿರದಲ್ಲಿ ಸೇರ್ಪಡೆಗೊಳಿಸುವುದರ ಮೂಲಕ ಶಿಬಿರವನ್ನು ಯಶಸ್ವಿಗೊಳಿಸಬೇಕು’ ಎಂದು ಮನವಿ ಮಾಡಿದರು.

ಕೊಡವ ಸಮಾಜದ ಉಪಾಧ್ಯಕ್ಷ ಕರವಂಡ ಲವ ನಾಣಯ್ಯ, ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಳೆಯಡ ನಿಶಾ ಮೇದಪ್ಪ, ತರಬೇತಿದಾರರಾದ ಚೀಯಕಪೂವಂಡ ದೇವಿ ದೇವಯ್ಯ, ಕೋಡಿಮಣಿಯಂಡ ತಮ್ಮಿಣಿ ಬೋಪಯ್ಯ, ಚೇನಂಡ ಮಧು ಮಾದಯ್ಯ, ಚೇನಂಡ ಗಿರೀಶ್ ಪೂಣಚ್ಚ, ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ಸೇರಿದಂತೆ ಪೋಷಕರು ಸಮಾಜ ಬಾಂಧವರು ಉಪಸ್ಥಿತರಿದ್ದರು. ಕೊಡವ ಆಟ್ ಪಾಟ್ ಶಿಬಿರವು ಒಂದು ತಿಂಗಳ ಕಾಲ ನಡೆಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-51-130111145

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.