ಮಡಿಕೇರಿ: ಇಲ್ಲಿನ ಬಾಲಗೋಕುಲದ ವತಿಯಿಂದ ಏಪ್ರಿಲ್ 4 ರಿಂದ ಏಪ್ರಿಲ್ 12 ರವರೆಗೆ ಪ್ರತಿದಿನ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಗರದ ಓಂಕಾರೇಶ್ವರ ದೇವಾಲಯದ ಬಳಿ ಇರುವ ‘ಮಧುಕೃಪ’ ದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ‘ಬಾಲ ಗೋಕುಲ ಬೇಸಿಗೆ ಶಿಬಿರ’ವನ್ನು ಹಮ್ಮಿಕೊಳ್ಳಲಾಗಿದೆ.

5ನೇ ತರಗತಿಯಿಂದ 10ನೇ ತರಗತಿಯವರೆಗಿನ ಬಾಲಕ ಮತ್ತು ಬಾಲಕಿಯರು ಈ ಶಿಬಿರದಲ್ಲಿ ಭಾಗವಹಿಸಲು ಅವಕಾಶವಿದೆ.

ಶಿಬಿರದಲ್ಲಿ ಮಕ್ಕಳಿಗೆ ಜೀವನ ಶಿಕ್ಷಣ, ನಿತ್ಯ ಶ್ಲೋಕಗಳು ಮತ್ತು ಭಜನೆ, ದೇಶಭಕ್ತಿ ಗೀತೆಗಳು, ಸ್ವಾತಂತ್ರ್ಯ ಹೋರಾಟಗಾರರ ಸ್ಫೂರ್ತಿದಾಯಕ ಕಥೆಗಳು ಹಾಗೂ ಭಗವದ್ಗೀತೆಯ ಶ್ಲೋಕ ಪಠಣವನ್ನು ಕಲಿಸಿಕೊಡಲಾಗುವುದು. ಇದರೊಂದಿಗೆ ಮಕ್ಕಳ ಬೌದ್ಧಿಕ ವಿಕಸನಕ್ಕೆ ಪೂರಕವಾದ ರಾಷ್ಟ್ರೀಯ ಆಟಗಳನ್ನು ಆಡಿಸಲಾಗುವುದು. ಶಿಬಿರದಲ್ಲಿ ಪಾಲ್ಗೊಳ್ಳುವ ಎಲ್ಲಾ ಶಿಬಿರಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಗುವುದು. ನೋಂದಣಿಗೆ ಏಪ್ರಿಲ್ 2 ಕೊನೆಯ ದಿನ. ಮಾಹಿತಿಗೆ ಮೊ: 9448541328 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-51-849804252

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.