ಮಡಿಕೇರಿ: ಇಲ್ಲಿನ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಗುರುವಾರ ನಡೆದ ಘಟಿಕೋತ್ಸವದಲ್ಲಿ ಎಂಬಿಬಿಎಸ್ ಪದವಿ ಪೂರ್ಣಗೊಳಿಸಿದ 150 ವೈದ್ಯಕೀಯ ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು.

ಶರೀರಕ್ರಿಯಶಾಸ್ತ್ರ ವಿಭಾಗದ ಸ್ನಾತ್ತಕೋತ್ತರ ವಿದ್ಯಾರ್ಥಿನಿ ಡಾ.ಎಂ.ಪಿ.ಹಿಮ ಅವರು ವಿಶ್ವವಿದ್ಯಾಲಯಕ್ಕೆ 2ನೇ ಸ್ಥಾನ ಪಡೆದರು.ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ– ಪರಿಸರ ಆರೋಗ್ಯ ಸಂಶೋಧನಾ ರಾಷ್ಟ್ರೀಯ ಸಂಸ್ಥೆಯ ನಿರ್ದೇಶಕ ಡಾ.ರಾಜ್ ನಾರಾಯಣ್ ತಿವಾರಿ ಮಾತನಾಡಿ, ‘ರೋಗಿಗಳೊಂದಿಗೆ ತೋರುವ ಸಹಾನುಭೂತಿ,ಮಾನವೀಯತೆ ವೈದ್ಯರ ವ್ಯಕ್ತಿತ್ವವನ್ನು ಪ್ರತಿಬಿಂಬಿಸುತ್ತದೆ’ ಎಂದರು.

‘ಎವಿಡೆನ್ಸ್ ಬೇಸ್ಡ್ ಮೆಡಿಸಿನ್’ ಇಂದಿನ ಕಾಲಕ್ಕೆ ಅತ್ಯಗತ್ಯ. ಹಾಗಾಗಿ, ಹೆಚ್ಚು ಹೆಚ್ಚು ಸಂಶೋಧನೆಗೆ ತೊಡಗಿಕೊಳ್ಳಬೇಕು ಎಂದರು

ಜಾಗತಿಕ ತಾಪಮಾನ ಏರಿಕೆ ಮತ್ತು ಪರಿಸರ ಹಾನಿ ಆರೋಗ್ಯ ಕ್ಷೇತ್ರದ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ, ಸುಸ್ಥಿರ ವೃತ್ತಿಪರತೆಯನ್ನು ಕಾಪಾಡಿಕೊಳ್ಳುವ ಅಗತ್ಯವಿದೆ ಎಂದರು.

ಮಂಡ್ಯ ಜಿಲ್ಲೆಯ ಡಾ.ಜಯರಾಮ್ ಅವರು ತಮ್ಮ ಪತ್ನಿಯು ಕೊಡಗಿನವರಾಗಿದ್ದು ಅವರ ಜ್ಞಾಪಕಾರ್ಥವಾಗಿ ಅವರ ಹೆಸರಿನಲ್ಲಿ ₹ 2.50 ಲಕ್ಷ ರೂಪಾಯಿ ಠೇವಣಿಯನ್ನು ಕಾಲೇಜಿನಲ್ಲಿ ಇರಿಸಿದ್ದು ಅದರ ಬಡ್ಡಿ ಮೊತ್ತದಲ್ಲಿ ಪ್ರಸೂತಿ ಮತ್ತು ಸ್ತ್ರೀ ರೋಗ ವಿಭಾಗದ ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ ಅಂಕ ಪಡೆದವರಿಗೆ ₹ 10 ಸಾವಿರ ವಿತರಿಸಿ ಗೌರವಿಸಲಾಯಿತು.

ಕೊಡಗು ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ಟಿ.ಎಂ.ಧರ್ಮಜ ಉತ್ತಪ್ಪ, ಸಂಸ್ಥೆಯ ನಿರ್ದೇಶಕ ಹಾಗೂ ಡೀನ್ ಡಾ.ಎ.ಜೆ.ಲೋಕೇಶ್, ಪ್ರಾಂಶುಪಾಲ ಡಾ.ವಿಶಾಲ್ ಕುಮಾರ್, ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಕೆ.ಎಂ.ರೋಹಿಣಿ, ವೈದ್ಯಕೀಯ ಅಧೀಕ್ಷಕ ಡಾ.ಸೋಮಶೇಖರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಂಜುಂಡಯ್ಯ, ಅಕಾಡೆಮಿಕ್ ರಿಜಿಸ್ಟ್ರಾರ್ ಡಾ.ರವಿಕಿರಣ್ ಕಿಸಾನ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-51-466500849

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.