ಕುಶಾಲನಗರ: ತಾಲ್ಲೂಕಿನ ಕೂಡಿಗೆ ಕೃಷಿ ಫಾರಂ ಆವರಣದಲ್ಲಿರುವ ಕೊಡಗು ಸೈನಿಕ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭ ಸೋಮವಾರ ನಡೆಯಿತು.

ಶಾಲೆಯ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ನಾಯಕರಿಗೆ ಶಾಲೆಯ ಪ್ರಾಚಾರ್ಯ ಕರ್ನಲ್ ಅಮರ್ ಜೀತ್ ಹಾಗೂ ಅತಿಥಿಗಳು ಭುಜದ ಮೇಲಿನ ಬ್ಯಾಡ್ಜ್ಗಳನ್ನು ಅನಾವರಣಗೊಳಿಸಿ, ವಿದ್ಯಾರ್ಥಿಗಳಿಗೆ ವಿವಿಧ ಜವಾಬ್ದಾರಿ ಗಳನ್ನು ಹಸ್ತಾಂತರಿಸಿದರು.

ಜೊತೆಗೆ ವಿವಿಧ ನಿಲಯಗಳ ನಾಯಕರ ನೇಮಕಾತಿಗಳನ್ನು ಸಹ ಮಾಡಲಾಯಿತು. ನಿಲಯ ಶಿಕ್ಷಕರು ಹಾಗೂ ಪ್ರಾಚಾರ್ಯರು ವಿದ್ಯಾರ್ಥಿಗಳಿಗೆ ಹೆಗಲ ಬ್ಯಾಡ್ಜ್ಗಳನ್ನು ಧರಿಸಿ ನಾಯಕತ್ವದ ಜವಾಬ್ದಾರಿ ವಹಿಸಿದರು.

ಶಾಲಾ ನಾಯಕನಾಗಿ ಆಯ್ಕೆಯಾದ ಕೆಡೆಟ್ ಚಿನ್ಮಯ ಖಾನಾವಲ್ಲಿ ಮಾರ್ಗದರ್ಶನದಲ್ಲಿ ನೂತನ ವಿದ್ಯಾರ್ಥಿ ನಾಯಕರು ಶಾಲೆಯ ಮೌಲ್ಯಗಳು, ಶಿಸ್ತು ಮತ್ತು ಗೌರವವನ್ನು ಎತ್ತಿಹಿಡಿಯುವುದಾಗಿ ಪ್ರತಿಜ್ಞೆ ಮಾಡಿದರು.

ಪ್ರಾಚಾರ್ಯ ಕರ್ನಲ್ ಅಮರ್ ಜೀತ್ ಸಿಂಗ್ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿ, ‘ವಿದ್ಯಾರ್ಥಿಗಳು ನಾಯಕತ್ವ ಧರ್ಮವನ್ನು ಬದ್ಧತೆಯಿಂದ ನಿರ್ವಹಿಸಬೇಕು ’ ಎಂದರು.

ಶಾಲೆಯ ಆಡಳಿತಾಧಿಕಾರಿಗಳಾದ ವಿಂಗ್ ಕಮಾಂಡರ್ ಪಿ. ಪ್ರಕಾಶ್ ರಾವ್, ಉಪ ಪ್ರಾಚಾರ್ಯ ವಿಂಗ್ ಕಮಾಂಡರ್ ಮೊಹಮ್ಮದ್ ಶಾಜಿ ಮತ್ತು ಹಿರಿಯ ಶಿಕ್ಷಕ ಎನ್. ವಿಬಿನ್ ಕುಮಾರ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-51-2010581821

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.