ಸೋಮವಾರಪೇಟೆ: ‘ಸಮಾಜದಲ್ಲಿ ಇಂದು ಹೋರಾಟಗಳು ಅತಿಯಾಗುತ್ತಿವೆ. ಅದರ ಲಾಭ ಕೇವಲ ಸ್ವಂತಕ್ಕಾಗಿ ಮಾತ್ರ ಆಗುತ್ತಿದ್ದು, ಅದರಿಂದ ಸಮಾಜಕ್ಕೆ ಯಾವುದೇ ಪ್ರಯೋಜನವಾಗುತ್ತಿಲ್ಲ. ಮುಖಂಡರು ಇಂತಹ ಹೋರಾಟಕ್ಕೆ ಅವಕಾಶ ಮಾಡಿಕೊಡುವುದು ಬೇಡ’ ಎಂದು ಮಡಿಕೇರಿಯ ಸರಸ್ವತಿ ಡಿಎಡ್ ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೇಳಿದರು.

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಇಲ್ಲಿನ ಚೆನ್ನಬಸಪ್ಪ ಸಭಾಂಗಣದಲ್ಲಿ ಮಂಗಳವಾರ ನಡೆದ ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಪ್ರಪಂಚಕ್ಕೆ ಜ್ಞಾನವನ್ನು ನೀಡಿದ್ದಕ್ಕಾಗಿ ಪ್ರಪಂಚದಲ್ಲಿ ಅವರನ್ನು ನೆನೆಯುವಂತಹ ಗೌರವಕ್ಕೆ ಭಾಜನವಾಗಿದ್ದಾರೆ. 198 ರಾಷ್ಟಗಳಲ್ಲಿ ವಿಶ್ವ ಜ್ಞಾನ ದಿನವನ್ನಾಗಿ ಅಂಬೇಡ್ಕರ್ ಜನ್ಮ ದಿನಾಚರಣೆ ಆಚರಿಸುತ್ತಿರುವುದು ಅವರಿಗೆ ಸಂದ ಗೌರವವಾಗಿದೆ’ ಎಂದರು.

ತಹಶೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ ಕಾರ್ಯಕ್ರಮ ಉದ್ಘಾಟಿಸಿದರು. ‘ಅಂಬೇಡ್ಕರ್ ಅವರ ಜೀವನ ಚರಿತ್ರೆಗಾಗಿ ಅವರಿಗೆ ಸಂಬಂಧ ಪಟ್ಟ ಪುಸ್ತಕಗಳನ್ನು ಓದಬೇಕು. ಜೀವನಪೂರ್ತಿ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಮನುಷ್ಯರಾಗಿ ಬದುಕಲು ಎಲ್ಲರೂ ಮುಂದಾಗಬೇಕು’ ಎಂದರು.

ಸೂಡ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎ.ಅದಮ್, ಕೆಡಿಪಿ ಸದಸ್ಯ ವೇದಕುಮಾರ್, ಪ್ರಮುಖರಾದ ಜಯಪ್ಪ ಹಾನಗಲ್ಲು, ಬಿ.ಈ. ಜಯೇಂದ್ರ, ಹೊನ್ನಪ್ಪ, ಜಾನಕಿ ವೆಂಕಟೇಶ್, ಮೋಹಿನಿ, ತಾಲ್ಲೂಕು ಪಂಚಾಯಿತಿ ಇಒ ಪರಮೇಶ ಕುಮಾರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ರೇಂಜರ್ ಶೈಲೇಂದ್ರ, ಇನ್ಸ್ಪೆಕ್ಟರ್ ಮುದ್ದುಮಹದೇವ, ಬಿಇಒ ಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದೇಗೌಡ ಇದ್ದರು. ಬಾಣವಾರ ರಸ್ತೆಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ನಂತರ, ಮೆರವಣಿಗೆ ಮೂಲಕ ಚೆನ್ನಬಸಪ್ಪ ಸಭಾಂಗಣಕ್ಕೆ ಬರಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-51-2130240564

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.