ಮಡಿಕೇರಿ: ಕಲಿಕೆಯಲ್ಲಿ ಹಿಂದುಳಿದ ಹಾಗೂ ಸಾಧಾರಣ ಎನಿಸುವ ವಿದ್ಯಾರ್ಥಿಗಳನ್ನು ಇನ್ನಷ್ಟು ಪ್ರಗತಿಯತ್ತ ಕೊಂಡೊಯ್ಯಲು ‘ಮಾನಿಟರಿಂಗ್ ಅಂಡ್ ಮೋಟಿವೇಷನ್’ ಶಿಕ್ಷಣ ಮಾರ್ಗದರ್ಶಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಶಾಸಕ ಡಾ.ಮಂತರ್ಗೌಡ ಸಲಹೆ ನೀಡಿದರು.

ಕನ್ನಡಸಿರಿ ಸ್ನೇಹ ಬಳಗ ವತಿಯಿಂದ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆದ ಕೊಡಗು ಜಿಲ್ಲೆಯ ಪ್ರೌಢಶಾಲೆಗಳ ಮುಖ್ಯಸ್ಥರಿಗೆ ಇಲ್ಲಿನ ಗಾಂಧಿ ಭವನದಲ್ಲಿ ಶುಕ್ರವಾರ ಸಾಧನಸಿರಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ಶಿಕ್ಷಕರು ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಓದುವತ್ತ ಪ್ರೋತ್ಸಾಹಿಸಬೇಕು ಮತ್ತು ಉತ್ತೇಜನ ನೀಡಬೇಕು. ಅದನ್ನು ಬಿಟ್ಟು ಕುಗ್ಗಿಸುವ ಕೆಲಸ ಮಾಡಬಾರದು. ಇದರಿಂದ ವಿದ್ಯಾರ್ಥಿಗಳು ಮಾನಸಿಕ ಹಿಂಸೆಗೆ ತುತ್ತಾಗುವ ಸಾಧ್ಯತೆ ಇದೆ. ಆದ್ದರಿಂದ ಶಿಕ್ಷಕರು ಧನಾತ್ಮಕವಾಗಿ ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದರು.

ಮಕ್ಕಳಿಗೆ ಒಳ್ಳೆಯ ಭವಿಷ್ಯ ರೂಪಿಸಿದ್ದಲ್ಲಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಅತೀ ಮುಖ್ಯವಾಗಿದೆ ಎಂದು ತಿಳಿಸಿದರು.ಕನ್ನಡಸಿರಿ ಸ್ನೇಹ ಬಳಗವು ಜಿಲ್ಲೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆದಿರುವ ಶಾಲೆಗಳ ಶಿಕ್ಷಕರನ್ನು, ಮುಖ್ಯ ಶಿಕ್ಷಕರನ್ನು ಗೌರವಿಸುತ್ತಿರುವುದು ಅತ್ಯುತ್ತಮ ಕಾರ್ಯ ಎಂದು ಶ್ಲಾಘಿಸಿದರು.

ಕುಶಾಲನಗರ ರೋಟರಿ ಸಂಸ್ಥೆಯ ಅಸಿಸ್ಟೆಂಟ್ ಗವರ್ನರ್ ಎಂ.ಡಿ.ರಂಗಸ್ವಾಮಿ, ಡಯಟ್ ಉಪ ನಿರ್ದೇಶಕ ರಾಮಚಂದ್ರ ರಾಜೇ ಅರಸ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಹೇಶ್, ಎಂ.ಕೃಷ್ಣಪ್ಪ, ಟಿ.ಜೆ.ಅನಂದ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಜಿ.ಕುಮಾರ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾದ ರವಿ ಕೃಷ್ಣ, ಟಿ.ಆರ್.ರತ್ನಕುಮಾರ್, ಡಿ.ಚಂದನ, ಕಸಾಪ ಮಡಿಕೇರಿ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಕುಡೆಕಲ್ ಸಂತೋಷ್, ಸಾಹಿತಿಗಳಾದ ಕಿಗ್ಗಾಲು ಗಿರೀಶ್, ಮೊಣ್ಣಂಡ ಶೋಭ ಸುಬ್ಬಯ್ಯ, ಚಿತ್ರಕಲಾವಿದ ಉ.ರಾ.ನಾಗೇಶ್, ಶಿಕ್ಷಕರಾದ ಉಷಾರಾಣಿ, ಕುಮಾರ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-51-426648984

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.