ಮಡಿಕೇರಿ: ವಿದ್ಯಾರ್ಥಿಗಳು ಗುರುಗಳಿಗೆ ಗೌರವ ಹಾಗೂ ಸಹಕಾರ ನೀಡಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರ ಹೇಳಿದರು.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾಲೇಜಿನ 77ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಐತಿಹಾಸಿಕ ಹಿನ್ನೆಲೆ ಹೊಂದಿರುವ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಅವಕಾಶ ಕಲ್ಪಿಸಿದ್ದು, ಕಾಲೇಜಿನ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿಯೂ ಅವರು ಭರವಸೆ ನೀಡಿದರು.ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು 77 ಅರ್ಥಪೂರ್ಣ ವಸಂತವನ್ನು ಪೂರೈಸಿದ್ದು, ತನ್ನದೇ ಆದ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದೆ. ಸಾವಿರಾರು ವಿದ್ಯಾರ್ಥಿಗಳಿಗೆ ಹಲವಾರು ಇತಿಮಿತಿಗಳ ನಡುವೆಯೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಿಕೊಟ್ಟಿರುವುದು ಶ್ಲಾಘನೀಯ ಎಂದರು. ಮುಂದಿನ ದಿನಗಳಲ್ಲಿಯೂ ಕಾಲೇಜು ತನ್ನ ಹಿರಿಮೆ, ಗರಿಮೆಯನ್ನು ನಾಡಿನಾದ್ಯಂತ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಎಂದರೆ ಸಾಧಕರ ಕಾಲೇಜು ಎಂದರು. 1949ರಲ್ಲಿ ಆರಂಭವಾದ ಕಾಲೇಜಿನಲ್ಲಿ ರಾಜಕೀಯ, ಸೇನೆ, ಪೊಲೀಸ್ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು, ಈಗಲೂ ಹಲವಾರು ಸಾಧಕರಿದ್ದಾರೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ.ರಾಘವ ಬಿ ಮಾತನಾಡಿ, ಕಾಲೇಜಿನ ಬೋಧಕ, ಬೋಧಕೇತರ ಎಲ್ಲಾ ಸಿಬ್ಬಂದಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ. ಹಳೆಯ ವಿದ್ಯಾರ್ಥಿ ಸಂಘ ಸೇರಿದಂತೆ ದಾನಿಗಳ ಸಹಕಾರವೂ ಕಾಲೇಜಿಗೆ ದೊರೆಯುತ್ತಿದೆ ಎಂದು ಹೇಳಿದರು.

ಶೈಕ್ಷಣಿಕವಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಸಾಧಕರನ್ನು ಗೌರವಿಸಲಾಯಿತು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ವಿಭಾಗೀಯ ವ್ಯವಸ್ಥಾಪಕ ಸಿ.ಜಿ.ವಿನಾಯಕ್, ಕೊಡಗು ಪರೀಕ್ಷಾಂಗ ವಿಭಾಗದ ವಿಶೇಷ ಅಧಿಕಾರಿ ಮೇಚಿರ ರವಿಶಂಕರ್, ಐಕ್ಯೂಎಸಿ ಸಂಚಾಲಕರಾದ ಪ್ರೊ.ಕೆ.ಪಿ.ನಾಗರಾಜ್, ವಿದ್ಯಾರ್ಥಿ ಸಂಘದ ಸಲಹೆಗಾರರಾದ ಪ್ರೊ.ಶ್ರೀಧರ್ ಹೆಗಡೆ, ಪದಾಧಿಕಾರಿಗಳಾದ ಕೆ.ಟಿ.ವರ್ಷ, ಕೆ.ಡಿ.ಇಂಪನಾ, ನಿಲಿಷಾ ಜೋಜೋ, ಬಿ.ಎಂ.ವಂದನಾ, ಎಸ್.ಶ್ರೀನಂದ, ಎನ್ಸಿಸಿ ನಾಯಕರಾದ ಕೆ.ಎಂ.ತಿಮ್ಮಯ್ಯ, ಬಿ.ಎಲ್.ಚರಿಷ್ಮಾ ರೈ, ಎಸ್.ಶ್ರೀನಂದ್, ಪ್ರೊ.ಅಲೋಕ್, ಕೆ.ಟಿ.ವರ್ಷ, ಎಚ್.ಜೆ.ರಾಕೇಶ್, ಜಿ.ವಿ.ರವಿಕುಮಾರ್, ಎಚ್.ಆರ್.ಸಂದೇಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-51-1918449137

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.