ಮಡಿಕೇರಿ: ಬುಡಕಟ್ಟು ಜನಾಂಗದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮವು ಮೇ 5ರಂದು ಬೆಳಿಗ್ಗೆ 10.30ಕ್ಕೆ ತಿತಿಮತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ವತಿಯಿಂದ ನಡೆಯುವ ಈ ಕಾರ್ಯಕ್ರಮದಲ್ಲಿ ಹೈಕೋರ್ಟ್ನ ವಿಶ್ರಾಂತ ನ್ಯಾಯಮೂರ್ತಿ ಹಾಗೂ ನಾಲ್ಸಾ-ಸಂವಾದ(ಆದಿವಾಸಿ/ಬುಡಕಟ್ಟು/ಅಲೆಮಾರಿ ಜನಾಂಗಗಳ ಬಲವರ್ಧನೆ) ಯೋಜನೆ, 2025 ರ ಅಧ್ಯಕ್ಷರಾದ ಆರ್.ಗುರುರಾಜನ್, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಶಶಿಧರ ಶೆಟ್ಟಿ, ಹೆಚ್ಚುವರಿ ಜಿಲ್ಲಾಧಿಕಾರಿ ನಿರಂಜನ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಡಿವೈಎಸ್ಪಿ ಮಹೇಶ್ ಕುಮಾರ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಜಿಲ್ಲಾ ಸಮನ್ವಯ ಅಧಿಕಾರಿ ಹೊನ್ನೇಗೌಡ, ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಂಜುಂಡಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಡಿ.ಆರ್.ಪ್ರಸನ್ನ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-51-319251122

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.