ಬಂಗಾರಪೇಟೆ: ತಾಲ್ಲೂಕಿನ ತೊಪ್ಪನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಇದ್ದ ಸಾರ್ವಜನಿಕ ದಾರಿಯನ್ನು ಅತಿಕ್ರಮಿಸಿ ನಿವೇಶನ ಮಾಡಿಕೊಂಡಿದ್ದ ದಾರಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಮಂಗಳವಾರ ಬೃಹತ್ ಯಂತ್ರದ ಮೂಲಕ ತೆರವುಗೊಳಿಸಿದ್ದಾರೆ.

ಶಾಲಾ ಆವರಣಕ್ಕೆ ಸಂಪರ್ಕ ಕಲ್ಪಿಸುವ ದಾರಿಯನ್ನು ಅಕ್ರಮವಾಗಿ ಮುಚ್ಚಿ, ಅಲ್ಲಿ ಖಾಸಗಿ ನಿವೇಶನಗಳನ್ನು ನಿರ್ಮಿಸಲಾಗುತ್ತಿತ್ತು. ಇದರಿಂದ ವಿದ್ಯಾರ್ಥಿಗಳ ಓಡಾಟಕ್ಕೆ ತೀವ್ರ ಅಡಚಣೆಯಾಗಿತ್ತು. ಹಾಗಾಗಿ ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಈ ಬಗ್ಗೆ ಮೇ 12 ರಂದು ಪ್ರಜಾವಾಣಿ ಪತ್ರಿಕೆಯಲ್ಲಿ ‘ಶಾಲೆ ದಾರಿ ಅತಿಕ್ರಮಣ: ಬಿಇಒ ಪರಿಶೀಲನೆ’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು. ಇದರಿಂದ ಎಚ್ಚೆತ್ತ ಅಧಿಕಾರಿಗಳು ಮಂಗಳವಾರ ಶಾಲಾ ರಸ್ತೆಯಲ್ಲಿದ್ದ ಮಣ್ಣನ್ನು ತೆರವುಗೊಳಿಸಿ, ಶಾಲೆ ದಾರಿಯನ್ನು ಸುಗಮಗೊಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-18-1157046043

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.