ಬೇತಮಂಗಲ: ಹೋಬಳಿಯಾದ್ಯಂತ ಸೋಮವಾರ ಶಾಲೆಗಳು ಪುನರಾರಂಭಗೊಂಡಿದ್ದು, ಬೇಸಿಗೆ ರಜೆ ಮುಗಿಸಿಕೊಂಡು ಬಂದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿತ ಪ್ರೀತಿಯಿಂದ ಬರಮಾಡಿಕೊಂಡರು.

ಬೇತಮಂಗಲ ಗ್ರಾಮದ ಹೊಸ ಬಡಾವಣೆಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳನ್ನು ಶಾಲಾ ಪ್ರವೇಶ ದ್ವಾರದಲ್ಲಿ ಆರತಿ ಬೆಳಗಿ, ಸಿಹಿ ನೀಡುವ ಮೂಲಕ ಸ್ವಾಗತಿಸಿದರು.

ಮಕ್ಕಳನ್ನು ಆಕರ್ಷಿಸಲು ಇಡೀ ಶಾಲೆಯನ್ನು ಹಸಿರು ತೋರಣ ಹಾಗೂ ವಿವಿಧ ಬಣ್ಣದ ಹೂಗಳಿಂದ ಸಿಂಗಾರ ಮಾಡಿ ಹೊಸ ರೂಪ ನೀಡಲಾಗಿತ್ತು. ಶಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ರಜೆ ಮುಗಿಸಿ ಬಂದ ಮಕ್ಕಳು ತಮ್ಮ ಗೆಳೆಯರೊಂದಿಗೆ ಸಡಗರದಿಂದ ಹೆಜ್ಜೆ ಹಾಕಿದರು.

ಶಾಲಾ ಮುಖ್ಯ ಶಿಕ್ಷಕ ರಾಮಚಂದ್ರಪ್ಪ ಮಾತನಾಡಿ, ನಮ್ಮ ಶಾಲೆಯಲ್ಲಿ ಕನ್ನಡ ಮತ್ತಯ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ನೋಟ್ ಪುಸ್ತಕ, ಮಧ್ಯಾಹ್ನದ ಬಿಸಿಯೂಟ ಹಾಗೂ ಸಮವಸ್ತ್ರ ಸೇರಿದಂತೆ ಕಲಿಕೆಗೆ ಅಗತ್ಯ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುತ್ತಿದೆ. ಇದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಿ ಎಂದರು.

ಗ್ರಾ.ಪಂ.ಮಾಜಿ ಸದಸ್ಯೆ ಸುಕನ್ಯಾ ಜಯಕುಮಾರ್, ಸರಿತಾ ರಮೇಶ್, ಶಿಕ್ಷಕರಾದ ಪ್ರಸನ್ನ ಕುಮಾರ್, ಅರುಣಾ, ಜಯಶ್ರೀ, ಗೀತಮ್ಮ, ಪೋಷಕರಾದ ವಾಸು, ವೆಂಕಟೇಶ್, ಮುನಿರಾಜು, ಹಳೆ ವಿದ್ಯಾರ್ಥಿಗಳಾದ ಪ್ರಸ್ ಮಂಜು, ಪ್ರಶಾಂತ್ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-18-1187749549

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.