ಕೋಲಾರ: ಪ್ರಥಮದರ್ಜೆ ಕಾಲೇಜುಗಳ ಅಭಿವೃದ್ಧಿಗೆ ಕೋಲಾರ ವಿಧಾನಸಭಾ ಕ್ಷೇತ್ರವೊಂದರಲ್ಲಿಯೇ ಸುಮಾರು ₹ 103 ಕೋಟಿ ಅನುದಾನ ಉನ್ನತ ಶಿಕ್ಷಣ ಇಲಾಖೆಯಿಂದ ಲಭಿಸಿದೆ. ಉಸ್ತುವಾರಿ ಸಚಿವ ಬೈರತಿ ಸುರೇಶ್ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರಿಂದಾಗಿ ಈ ಅನುದಾನ ಸಿಕ್ಕಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು

ನಗರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಮಹಿಳಾ ಕಾಲೇಜಿನ 2025-26 ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳ ಭವಿಷ್ಯ ಪೆನ್ನು, ಪುಸ್ತಕದ ಮೇಲಿದೆ. ಅದನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಂಡು ಒಳ್ಳೆಯ ಉದ್ಯೋಗ ಪಡೆದು ಜೀವನ ನಡೆಸಿದಾಗ ಮಾತ್ರವೇ ಪೋಷಕರು ಹಾಗೂ ಗುರುಗಳಿಗೆ ಗೌರವ ಕೊಟ್ಟಂತೆ. ಪುಸ್ತಕವನ್ನು ತಾಯಿ ರೀತಿ, ಪೆನ್ನು ತಂದೆ ರೀತಿ, ಹೃದಯವನ್ನು ಗುರುಗಳ ಸ್ಥಾನದಲ್ಲಿ ನೋಡಬೇಕು. ಇವರು ಯಾವತ್ತೂ ಕೆಟ್ಟದ್ದು ಬಯಸಲ್ಲ; ಒಳ್ಳೆಯದನ್ನು ಕಲಿಸಿಕೊಡುತ್ತಾರೆ ಎಂದರು.

ಸಂಸದ ಎಂ.ಮಲ್ಲೇಶ್ ಬಾಬು ಮಾತನಾಡಿ, ‘ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ಓದು ಹಾಗೂ ಕ್ರೀಡೆ ಎರಡರಲ್ಲೂ ಸಾಧನೆ ಮಾಡಿದ್ದಾರೆ. ಸಮಾಜದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ನಿಭಾಯಿಸುವ ಸಾಮರ್ಥ್ಯ ಹೊಂದಿದ್ದಾರೆ. ಶಿಕ್ಷಣ ಪಡೆದರೆ ಅದನ್ನು ಕಿತ್ತುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ‘ಮಹಿಳಾ ಕಾಲೇಜಿಗೆ ಇತಿಹಾಸವಿದೆ. ಖಾಸಗಿ ಕಾಲೇಜುಗಳ ವ್ಯಾಮೋಹದ ಮಧ್ಯೆ ಸುಮಾರು 3 ಸಾವಿರ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ಇಂತಹ ಕಾಲೇಜಿಗೆ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ₹ 42.50 ಕೋಟಿ ಅನುದಾನದಲ್ಲಿ ಹೊಸ ಕಟ್ಟಡ ಕಟ್ಟಲು ಮುಂದಾಗಿದ್ದು, ಇದ್ದಕ್ಕೆ ಪುರಾತತ್ತ್ವ ಇಲಾಖೆಯಿಂದ ಕಾನೂನು ಅಡ್ಡಿ ಬಂದಿದೆ. ಈ ಇಲಾಖೆ ಕೇಂದ್ರ ಸರ್ಕಾರದ ಅಧೀನದಲ್ಲಿದ್ದು ಸಂಸದ ಮಲ್ಲೇಶ್ ಬಾಬು ಗಮನ ಹರಿಸಿ ಕಾನೂನು ತೊಡಕು ಸರಿ ಪಡಿಸಬೇಕು’ ಎಂದು ಕೋರಿದರು.

ವಿಧಾನ ಪರಿಷತ್ ಸದಸ್ಯ ನಸೀರ್ ಅಹಮದ್ ಮಾತನಾಡಿ, ‘ಎಲ್ಲಾ ಕ್ಷೇತ್ರಗಳಲ್ಲಿ ಉದ್ಯೋಗ ಲಭ್ಯವಿವೆ. ಅದನ್ನು ಕೌಶಲದ ಮೂಲಕ ಪಡೆದುಕೊಳ್ಳಬೇಕು’ ಎಂದರು.

ಮಾಜಿ ಶಾಸಕ ಕೆ.ಆರ್.ಶ್ರೀನಿವಾಸಯ್ಯ ಅವರನ್ನು ಸನ್ಮಾನಿಸಲಾಯಿತು. ವಿವಿಧ ಕ್ರೀಡೆಗಳಲ್ಲಿ ಜಯಶೀಲರಾದವರಿಗೆ ಪ್ರಶಸ್ತಿ ಹಾಗೂ ಪಾರಿತೋಷಕ ನೀಡಲಾಯಿತು.

ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ.ಶಿವಕುಮಾರ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ‘ಕುಡಾ’ ಅಧ್ಯಕ್ಷ ಮಹಮ್ಮದ್ ಹನೀಫ್, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ಸರ್, ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಶ್ರೀನಿವಾಸಗೌಡ, ಕಾಲೇಜು ಸಮಿತಿ ಸದಸ್ಯರಾದ ರಘು, ಚಿನ್ನಾಪುರ ನಾರಾಯಣಸ್ವಾಮಿ, ವಿಜಯನಗರ ಮಂಜುನಾಥ್, ಕೆಡಿಪಿ ಸದಸ್ಯ ಯಲವಾರ ರಾಜಕುಮಾರ್, ಉನ್ಯಾಸಕರು, ಸಿಬ್ಬಂದಿ, ಪೋಷಕರು, ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-18-270391875

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.