ಕೋಲಾರ: ದೇಗುಲಗಳು, ದರ್ಗಾ, ಚರ್ಚ್ಗಳಿಗಿಂತ ಶಿಕ್ಷಣ ನೀಡುವ ಶಾಲೆಗಳೇ ನಿಜವಾದ ದೇಗುಲಗಳು, ಪುಸ್ತಕವೇ ತಾಯಿ ಮತ್ತು ಪೆನ್ನು ತಂದೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸಬೇಕು, ಅದರಲ್ಲೂ ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ಪೋಷಕರಿಗೆ ತಿಳಿಸಿದರು.

ತಾಲ್ಲೂಕಿನ ನರಸಾಪುರದಲ್ಲಿ ಸೋಮವಾರ ಕರ್ನಾಟಕ ಪಬ್ಲಿಕ್ ಶಾಲೆಯ (ಕೆಪಿಎಸ್) 2026-27 ನೇ ಸಾಲಿನ ಶಾಲಾ ಪ್ರಾರಂಭೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.

ನೂರಾರು ಪೋಷಕರು ಖಾಸಗಿ ಶಾಲೆಯ ಶುಲ್ಕಕಟ್ಟಲಾಗದೆ ನೆರವು ಕೋರಿ ಬರುತ್ತಾರೆ. ಸರ್ಕಾರದಿಂದ ಬರುವ ವೇತನ, ಗೌರವಧನವನ್ನು ಬಡ ಮಕ್ಕಳ ಶುಲ್ಕ ಹಾಗೂ ಆಸ್ಪತ್ರೆ ಖರ್ಚಿಗಾಗಿಯೇ ಚೆಕ್ ಮೂಲಕ ವಿತರಿಸುತ್ತಿದ್ದೇನೆ. ಪೋಷಕರು ಖಾಸಗಿ ಶಾಲೆಯ ಭಾರ ಹೊರುವ ಬದಲು ಸರ್ಕಾರಿ ಶಾಲೆಗಳ ಸೌಲಭ್ಯ ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಸರ್ಕಾರಿ ಶಾಲೆಯ ಮಕ್ಕಳು ತಾವು ಖಾಸಗಿ ಶಾಲೆಗಳ ಮಕ್ಕಳಿಗಿಂತ ಕಡಿನೆ ಇಲ್ಲ ಎನ್ನುವ ಆತ್ಮವಿಶ್ವಾಸದಿಂದ ಓದಬೇಕು ಎಂದರು.

ಇದೇ ವೇಳೆ ನರಸಾಪುರ ಶಾಲೆಯ ಕೊಠಡಿಗಳ ಕೊರತೆ, ಕಾಂಪೌಂಡ್ ಹಾಗೂ ಆಟದ ಮೈದಾನದ ಅಭಿವೃದ್ಧಿ ಕುರಿತು ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದರು. ಇದಕ್ಕೆ ತಕ್ಷಣವೇ ಸ್ಪಂದಿಸಿದ ಅವರು, ‘ನಮ್ಮ ಭಾಗದಲ್ಲಿ ಸಾಕಷ್ಟು ಕೈಗಾರಿಕೆಗಳಿದ್ದು, ಸಿಎಸ್ಆರ್ ನಿಧಿ ಲಭ್ಯವಿದೆ. ನಾನು ಖುದ್ದಾಗಿ ಉದ್ಯಮಿಗಳೊಂದಿಗೆ ಮಾತನಾಡಿ ಶೀಘ್ರದಲ್ಲೇ ಶಾಲೆಗೆ ಅಗತ್ಯವಿರುವ ಹೆಚ್ಚುವರಿ ಕೊಠಡಿ ಹಾಗೂ ಮೈದಾನದ ಕಾಮಗಾರಿಯನ್ನು ಮಾಡಿಸಿಕೊಡುತ್ತೇನೆ’ ಎಂದು ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ‘ಶಾಸಕರು ಇವತ್ತಿನ ರಾಜಕೀಯದ ಸಂದರ್ಭದಲ್ಲಿ ಬೇರೆ ಶಾಸಕರಂತೆ ದೆಹಲಿಗೆ ಹೋಗಿ ಮಂತ್ರಿ ಸ್ಥಾನಕ್ಕೆ ಲಾಬಿ ಮಾಡುತ್ತಿಲ್ಲ. ಸರ್ಕಾರಿ ಶಾಲೆಗಳ ಬಗ್ಗೆ ಇರುವ ಕಾಳಜಿಗೆ ಬಂದಿದ್ದಾರೆ. ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಕೆಪಿಎಸ್ ಶಾಲೆಗಳು ಸಹಕಾರಿಯಾಗಲಿವೆ’ ಎಂದರು.

ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಬ್ಯಾಗ್ ಗಳನ್ನು ದಾನಿಗಳು ವಿತರಿಸಿದರು. ಖಾಜಿಕಲ್ಲಹಳ್ಳಿ ಮುನಿರಾಜು, ಉರಟ ಅಗ್ರಹಾರ ಚೌಡರೆಡ್ಡಿ, ಕೆಪಿಎಸ್ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಶ್ರೀನಿವಾಸ್, ಸತ್ಯನಾರಾಯಣ ಜ್ಯೂವೆಲರ್ಸ್ ಮಾಲೀಕ ಬಿ.ಎಸ್.ವೆಂಕಟೇಶ್, ಮುಖ್ಯ ಶಿಕ್ಷಕ ಗೋಪಿನಾಥ್, ಶಿಕ್ಷಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-18-1756825193

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.