ಕೋಲಾರ: ಹಾಸ್ಟೆಲ್ಗಳಿಗೆ ಭೇಟಿ ನೀಡಿದಾಗ ಬಿಸಿ ನೀರು ಬರುವುದಿಲ್ಲ, ಬಿಸಿ ಊಟ ಕೊಡುವುದಿಲ್ಲ ಮತ್ತು ಗುಣಮಟ್ಟದ ಆಹಾರ ಸಿಗುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿವೆ. ಈ ಸಂಬಂಧ ಅಧಿಕಾರಿಗಳು ಗಮನಹರಿಸಿ ಸರಿಪಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿನಿಲಯಗಳ ನಿರ್ವಹಣೆ, ಶೈಕ್ಷಣಿಕ ಗುಣಮಟ್ಟ ಸುಧಾರಣೆ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಗೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಯಿತು.

ಮುಂದಿನ ವರ್ಷ ಯಾವುದೇ ವಿದ್ಯಾರ್ಥಿ ಅನುತ್ತೀರ್ಣವಾಗದಂತೆ ಶೇ 100 ಫಲಿತಾಂಶ ತರಲು ಪ್ರಯತ್ನಿಸಬೇಕು. ಈ ನಿಟ್ಟಿನಲ್ಲಿ ಇಲಾಖೆಯ ಸಿಬ್ಬಂದಿ ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ಪ್ರತಿಯೊಬ್ಬರೂ ನೂರಕ್ಕೆ ನೂರರಷ್ಟು ಶ್ರಮ ಹಾಕಿದರೆ ಎಲ್ಲಾ ಶಾಲೆ ಹಾಗೂ ವಸತಿ ನಿಲಯಗಳನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಬಹುದು ಎಂದರು.

ಸಮಾಜ ಕಲ್ಯಾಣ ಇಲಾಖೆ, ಬಿಸಿಎಂ ಹಾಗೂ ಕ್ರೈಸ್ ಮೂರು ಇಲಾಖೆಗಳು ಕೈಜೋಡಿಸಿ ಜೊತೆಯಲ್ಲಿ ಕೆಲಸ ಮಾಡಿದರೆ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಫಲಿತಾಂಶಗಳಲ್ಲಿ ಉತ್ತಮ ಪ್ರಗತಿ ಸಾಧಿಸಿ, ಇಡೀ ರಾಜ್ಯದಲ್ಲೇ ನಮ್ಮ ಜಿಲ್ಲೆ ಯಶಸ್ವಿಯಾಗುವಂತೆ ಮಾಡಬಹುದು ಎಂದು ಹೇಳಿದರು.

ಸುರಕ್ಷತೆಯ ದೃಷ್ಟಿಯಿಂದ ಹಾಸ್ಟೆಲ್ಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಬೇಕು. ಗೇಟ್ಗಳು, ಬಾಗಿಲುಗಳು ಮತ್ತು ಕಿಟಕಿಗಳು ಸರಿಯಾಗಿವೆಯೇ ಎಂಬುದನ್ನು ಪರಿಶೀಲಿಸಿ ಮೂಲಸೌಕರ್ಯ ಸರಿಪಡಿಸಬೇಕು ಎಂದು ತಾಕೀತು ಮಾಡಿದರು.

ಮೊದಲು ಸುರಕ್ಷತೆ, ನಂತರ ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕು ಸ್ನಾನಗೃಹ ಹಾಗೂ ಶೌಚಾಲಯಗಳನ್ನು ಸದಾ ಸ್ವಚ್ಛವಾಗಿಟ್ಟುಕೊಳ್ಳಬೇಕು. ನಾವು ನಮ್ಮ ಮನೆಯನ್ನು ಹೇಗೆ ಸ್ವಚ್ಛವಾಗಿಟ್ಟುಕೊಳ್ಳುತ್ತೇವೆಯೋ ಅದೇ ರೀತಿ ಹಾಸ್ಟೆಲ್ಗಳನ್ನೂ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಗಣಿತದಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಆಯಾ ವಿಷಯ ತಜ್ಞರನ್ನು ಕರೆಸಿ ವಿಶೇಷ ಕಾಳಜಿ ವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ ಮತ್ತು ಕ್ರೈಸ್ ಹಾಸ್ಟೆಲ್ಗಳಲ್ಲಿ ವಾರ್ಡನ್ಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಜಿ.ಪಂ ಉಪಕಾರ್ಯದರ್ಶಿ ಟಿ.ಕೆ.ರಮೇಶ್ ಮಾತನಾಡಿ, ‘ಹಾಸ್ಟೆಲ್ಗಳಲ್ಲಿ ಯಾವುದೇ ಮೂಲಸೌಕರ್ಯ ಅಥವಾ ನೀರಿನ ಸಮಸ್ಯೆ ಇದ್ದರೆ ಮೊದಲು ಅದನ್ನು ಪಿಡಿಒ ಹಾಗೂ ಇಒ ಗಮನಕ್ಕೆ ತರಬೇಕು. ಅಲ್ಲಿ ಪರಿಹಾರ ಸಿಗದಿದ್ದರೆ, ತಕ್ಷಣವೇ ಸಿಇಒಗೆ ಲಿಖಿತವಾಗಿ ವರದಿ ನೀಡಬೇಕು. ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು, ಗ್ರಾಮ ಪಂಚಾಯಿತಿ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಶೀಘ್ರದಲ್ಲೇ ನೀರಿನ ಸಂಪರ್ಕ ಕೊಡಿಸಲಾಗುವುದು’ ಎಂದರು.

ಸಭೆಯಲ್ಲಿ 2024-25 ಹಾಗೂ 2025-26ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಫಲಿತಾಂಶಗಳ ಪರಿಶೀಲನೆ ನಡೆಸಿ, ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಉತ್ತಮ ಫಲಿತಾಂಶ ಸಾಧಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಕ್ರ್ಯಾಶ್ ಕೋಚಿಂಗ್ ತರಗತಿಗಳು ಹಾಗೂ ‘ಟಾಪರ್ಸ್ ಟಾಕ್’ ಆಯೋಜಿಸುವ ಮೂಲಕ ವಿದ್ಯಾರ್ಥಿಗಳ ಸಾಧನೆ ಹೆಚ್ಚಿಸಲು ಒತ್ತು ನೀಡಲಾಯಿತು.

ವಿದ್ಯಾರ್ಥಿಗಳ ಕಲ್ಯಾಣ ಮತ್ತು ಸುರಕ್ಷತೆಗೆ ಆದ್ಯತೆ ನೀಡಲು ವಸತಿ ಶಾಲೆಗಳಲ್ಲಿ, ಹಾಸ್ಟೆಲ್ಗಳಲ್ಲಿ ದೂರು ಹಾಗೂ ಸಲಹಾ ಪೆಟ್ಟಿಗೆ ಅಳವಡಿಸುವುದು, ಮಕ್ಕಳ ಸಹಾಯವಾಣಿ 1098 ಕುರಿತು ಜಾಗೃತಿ ಮೂಡಿಸುವುದು ಹಾಗೂ ಸಂಜೆ 6 ಗಂಟೆಯೊಳಗೆ ವಿದ್ಯಾರ್ಥಿಗಳ ಹಾಜರಾತಿ ಪರಿಶೀಲನೆ ನಡೆಸುವಂತೆ ನಿರ್ದೇಶನ ನೀಡಲಾಯಿತು.

ವಿದ್ಯಾರ್ಥಿಗಳ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಹಾಸ್ಟೆಲ್ಗಳಲ್ಲಿ ಆ್ಯಂಟಿ ಸುಸೈಡ್ ಸ್ಪ್ರಿಂಗ್ ಲೋಡೆಡ್ ಫ್ಯಾನ್ ರಾಡ್ ಅಳವಡಿಸುವಂತೆ ಸೂಚನೆ ನೀಡಲಾಯಿತು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಂ.ಶ್ರೀನಿವಾಸ್, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಮೈಲಾರಪ್ಪ, ಜಿಲ್ಲಾ ಸಮನ್ವಯಾಧಿಕಾರಿ ಚಂದ್ರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಪ್ರಾಂಶುಪಾಲರು, ವಾರ್ಡನ್ಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-18-922695110

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.