ಕೋಲಾರ: ಟಿನಿ ಟಾಟ್ಸ್ ಶಾಲೆಯ ಮಕ್ಕಳಿಗೆ ಹಮ್ಮಿಕೊಂಡಿದ್ದ ‘ಕಲಾಸಂಸ್ಕೃತಿ’ ಬೇಸಿಗೆ ಶಿಬಿರದ ಮುಕ್ತಾಯ ಸಮಾರಂಭ ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆಯಿತು.

ಶಿಬಿರದಲ್ಲಿ ಭಾಗವಹಿಸಿದ ಮಕ್ಕಳು ಭಾರತನಾಟ್ಯ, ಕುಣಿತ ಭಜನೆ, ವಿಷ್ಣು ಸಹಸ್ರನಾಮ ಪಠಣ, ಯೋಗ ಹಾಗೂ ಪಾಶ್ಚಾತ್ಯ ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಮಕ್ಕಳಿಗೆ ಕಲಾಸಂಸ್ಕೃತಿಗೆ ಸಂಬಂಧಿಸಿದ ವಿವಿಧ ಕಲೆಗಳ ತರಬೇತಿಯನ್ನು ಅಶೋಕ್ ನಾಯಕ್ ತಂಡ ನೀಡಿತ್ತು.

ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ಮಕ್ಕಳ ಪ್ರತಿಭೆಯನ್ನು ಪ್ರಶಂಸಿಸಿದರು. ಕಲಾಸಂಸ್ಕೃತಿಯ ಮಹತ್ವವನ್ನು ವಿವರಿಸಿ, ಇಂತಹ ಶಿಬಿರಗಳು ಮಕ್ಕಳ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗುತ್ತವೆ ಎಂದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಕೆ.ಚಂದ್ರಶೇಖರ್ಮಾತನಾಡಿ, ಮಕ್ಕಳಲ್ಲಿ ಮೊಬೈಲ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದರು. ಸಂಬಂಧಗಳ ಬಗ್ಗೆ ಪೋಷಕರು ತಿಳುವಳಿಕೆ ನೀಡದ ಕಾರಣ ಸಂಬಂಧಗಳು ದೂರವಾಗುತ್ತಿವೆ ಎಂದರು.

ಮಕ್ಕಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಅನಿತಾ ಶ್ರೀನಿವಾಸ್, ಪೋಷಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-18-1009266270

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.