ಮಾಲೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ 2025-26ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಸಮಿತಿ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ಎನ್ಎಸ್ಎಸ್, ಎನ್ಸಿಸಿ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್, ಯುವ ರೆಡ್ ಕ್ರಾಸ್ ಘಟಕ ಹಾಗೂ ವಿವಿಧ ಚಟುವಟಿಕೆಗಳ ಸಮಾರೋಪ ಸಮಾರಂಭ ಮತ್ತು ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.

ಈ ವೇಳೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಎಂ.ಆಂಜಿನಪ್ಪ ಮಾತನಾಡಿ, ತಾಲ್ಲೂಕಿನ ಸರ್ಕಾರಿ ಶಾಲಾ-ಕಾಲೇಜುಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಎಲ್ಲಾ ರೀತಿಯ ಸೌಲಭ್ಯ ಒದಗಿಸುತ್ತಿದೆ. ಇವುಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ ಎಂದು ತಿಳಿಸಿದರು.

ತಾಲ್ಲೂಕಿನಲ್ಲಿ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರಿ ಶಾಲಾ ಕಾಲೇಜನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ವಿದ್ಯಾರ್ಥಿಗಳು ಕಾಲೇಜು ದಿನಗಳಲ್ಲಿ ಕಾಲ ಕಳೆಯದೆ, ಶಿಸ್ತು ರೂಢಿಸಿಕೊಳ್ಳಿ ಉತ್ತಮ ಜೀವನ ರೂಪಿಸಿಕೊಳ್ಳಿ ಎಂದರು.

ತಹಶೀಲ್ದಾರ್ ಎಂ.ವಿ.ರೂಪ, ಸುನೀಲ್ ನಂಜೇಗೌಡ, ಪ್ರೊ.ಜಿ.ಅಶ್ವಥ್ ನಾರಾಯಣ, ಫ್ರೆಂಡ್ಸ್ ಸಂತೋಷ್, ತನ್ವೀರ್, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-18-1829032475

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.