ಕೋಲಾರ: ಖಾಸಗಿ ಶಾಲೆಗಳ ಮಿತಿ ಮೀರಿದ ಪೈಪೋಟಿಯಿಂದಾಗಿ ಬಡವರ ಆಶಾಕಿರಣವಾಗಿರುವ ಸರ್ಕಾರಿ ಶಾಲೆಗಳು ಮುಚ್ಚುವ ಪರಿಸ್ಥಿತಿಗೆ ತಲುಪಬಾರದು. ಯಾವುದೇ ಕಾರಣಕ್ಕೂ ಕ್ಷೇತ್ರದಲ್ಲಿ ಹೊಸ ಖಾಸಗಿ ಶಾಲೆಗಳ ಸ್ಥಾಪನೆಗೆ ಇಲಾಖೆಯು ಅನುಮೋದನೆ ನೀಡಬಾರದು. ಲಭ್ಯವಿರುವ ಪ್ರತಿಯೊಂದು ಮಾನವ ಸಂಪನ್ಮೂಲವನ್ನೂ ಬಳಸಿ ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ಸೂಚನೆ ನೀಡಿದರು.

ನಗರದ ಬಿಇಒ ಕಛೇರಿಯಲ್ಲಿ ಸೋಮವಾರ ಕೋಲಾರ ವಿಧಾನಸಭಾ ಕ್ಷೇತ್ರದ ಶಿಕ್ಷಣ ಸುಧಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರಿ ಶಾಲೆಗಳ ಬಲವರ್ಧನೆಯಾದರೆ ಮಾತ್ರ ಬಡವರಿಗೆ ಶಿಕ್ಷಣ ಸಿಗಲು ಸಾಧ್ಯ. ಖಾಸಗಿ ಶಾಲೆಗಳು ಹಾಗೂ ಇಂಗ್ಲೀಷ್ ಮಾಧ್ಯಮಗಳ ಹಾವಳಿಯಿಂದಾಗಿ ಶಿಕ್ಷಣದ ಗುಣಮಟ್ಟ ಸರ್ಕಾರಿ ಶಾಲೆಗಳಲ್ಲಿ ಕಡಿಮೆಯಾಗಬಾರದು. ನೂತನ ಸಮಿತಿ ಸದಸ್ಯರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಜವಾಬ್ದಾರಿ ವಹಿಸಿ ಸರ್ಕಾರಿ ಶಾಲೆಗಳು ಬಲವರ್ಧನೆಯಾಗುವಂತೆ ಮಾಡಬೇಕು ಎಂದರು.

ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತೆ ಸಜ್ಜುಗೊಳಿಸಲು ಮತ್ತು ಸ್ಥಳೀಯ ಶೈಕ್ಷಣಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಈ ವಿಶೇಷ ಸಮಿತಿಯನ್ನು ನೇಮಕ ಮಾಡಲಾಗಿದೆ. ಈ ಸಮಿತಿಯಲ್ಲಿ ಜನಪ್ರತಿನಿಧಿಗಳ ಜೊತೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸದಸ್ಯ ಕಾರ್ಯದರ್ಶಿಯಾಗಿದ್ದು, ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಹಾಗೂ ಶಿಕ್ಷಣ ತಜ್ಞರು ಸಮಿತಿಯಲ್ಲಿದ್ದಾರೆ ಎಂದು ವಿವರಿಸಿದರು

ಸಭೆಯಲ್ಲಿ ಎಂಎಲ್ಸಿ ಎಂ.ಎಲ್.ಅನಿಲ್ ಕುಮಾರ್, ಬಿಇಒ ಉಮಾದೇವಿ, ಸಮಿತಿ ಸದಸ್ಯರಾದ ರವೀಂದ್ರ, ಶೈಲಜಾ, ಬಾಲಸುಬ್ರಮಣಿ, ಬಾಬು, ಚಲಪತಿ, ನಾಗೇಶ್, ಶಿಕ್ಷಣ ಇಲಾಖೆಯ ಸಿ.ವಿ ನಾಗರಾಜ್, ಚೌಡಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-18-1533133045

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.