ಕೋಲಾರ: ಬೆಂಗಳೂರಿನ ಎಸ್ಜೆಆರ್ ಕಾಲೇಜಿನ ಎನ್ಎಸ್ಎಸ್ ಘಟಕದಿಂದ 2025-26 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವನ್ನು ತಾಲ್ಲೂಕಿನ ನಾಗಲಾಪುರ ಸಂಸ್ಥಾನ ಮಠದಲ್ಲಿ ಆಯೋಜಿಸಲಾಗಿದೆ.

ಶಿಬಿರದ ಉದ್ಘಾಟನೆಯನ್ನು ಡಿಐಜಿಪಿ (ಪೊಲೀಸ್ ತರಬೇತಿ) ಡಿ.ದೇವರಾಜ್ ನಡೆಸಿಕೊಟ್ಟರು. ಸಮಾರಂಭದ ದಿವ್ಯ ಸಾನಿಧ್ಯವನ್ನು ನಾಗಲಾಪುರ ಮಠದ ತೇಜೇಶಲಿಂಗ ಸ್ವಾಮೀಜಿ ವಹಿಸಿದ್ದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ತಾಲ್ಲೂಕು ವೀರಶೈವ ವೇದಿಕೆಯ ಅಧ್ಯಕ್ಷರು, ಮುಖಂಡರು ಭಾಗವಹಿಸಿದ್ದರು.

ನಮ್ಮೂರಿಗೆ ಎನ್ಎಸ್ಎಸ್ ಸ್ವಯಂ ಸೇವಕರು ಬಂದು ಸೇವಾ ಕಾರ್ಯದಲ್ಲಿ ತೊಡಗಿರುವುದು ಅತೀವ ಸಂತೋಷವನ್ನು ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಕಾಲೇಜಿನ ಪ್ರಾಚಾರ್ಯ ಶೀಲವಂತ ಸಂಜೀವ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ಶಿಬಿರಾಧಿಕಾರಿ ಮಮತಾ ಸಾಲಿಮಠ, ಸಹ ಶಿಬಿರಾಧಿಕಾರಿ ಶಾಂತಲಾ, ಉದಯ್ ಸಿ.ಆರ್, ಉಮೇಶ ಆರಾಧ್ಯ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-18-1645705753

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.