ಕೋಲಾರ: ತಾಲ್ಲೂಕಿನ ಎಲ್ಲಾ ಹಂತದ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಮನಸ್ಸು ಮಾಡಿ ಎಲ್ಲಾ ಮಕ್ಕಳು ಸ್ಕೌಟ್ಸ್ ಗೈಡ್ಸ್ ಶಿಕ್ಷಣದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಬೇಕು ಎಂದು ತಾಲ್ಲೂಕಿನ ಪರಿಷತ್ ಅಧ್ಯಕ್ಷ ಕಾಡಹಳ್ಳಿ ಶಶಿಕುಮಾರ್ ಮನವಿ ಮಾಡಿದರು.

ನಗರದ ಸ್ಕೌಟ್ ಭವನದಲ್ಲಿ ಕೋಲಾರ ತಾಲ್ಲೂಕಿನ ಸ್ಕೌಟ್ಸ್ ಗೈಡ್ಸ್ ಸಂಸ್ಥೆಯ ಸರ್ವಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್ ಗೈಡ್ಸ್ ಚಳವಳಿ ಚಟುವಟಿಕೆಗಳು ನಿರಂತರವಾಗಿ ಸಾಗಲು ಶಾಲಾ ಕಾಲೇಜುಗಳ ಮುಖ್ಯಸ್ಥರಿಗೆ ಒಂದು ದಿನದ ಕಾರ್ಯಾಗಾರವನ್ನು ಆಯೋಜನೆ ಮಾಡಬೇಕು. ತರಬೇತಿ ಪಡೆದವರು ಮುಂದಿನ ಶೈಕ್ಷಣಿಕ ವರ್ಷದಿಂದ ತಮ್ಮ ಶಾಲೆಗಳಲ್ಲಿ ದಳಗಳನ್ನು ನಿರಂತರವಾಗಿ ನಡೆಸಿ ಮಕ್ಕಳಲ್ಲಿ ಜೀವನ ಕೌಶಲ ಬೆಳೆಸಬೇಕು ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-18-1093317817

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.