ಬೇತಮಂಗಲ: ಸಮೀಪದ ಸುಂದರಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುವರ್ಣಹಳ್ಳಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಾಖಲಾತಿ ಆಂದೋಲನಕ್ಕೆ ಚಾಲನೆ ನೀಡಲಾಯಿತು.

ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಶಿಕ್ಷಕರ ತಂಡವು ಮನೆ ಮನೆಗೆ ತೆರಳಿ ಪೋಷಕರಲ್ಲಿ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಎಂದು ಶಾಲೆಯಲ್ಲಿರುವ ಸೌಲಭ್ಯಗಳ ಕುರಿತು ಜಾಗೃತಿ ಮೂಡಿಸಿದರು.

ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ತೊರೆದು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ. ಸರ್ಕಾರದಿಂದ ಮಕ್ಕಳಿಗೆ ಉಚಿತವಾಗಿ ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ, ಪಠ್ಯಪುಸ್ತಕ, ನೋಟ್ ಪುಸ್ತಕ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಶಾಲಾ ಮುಖ್ಯ ಶಿಕ್ಷಕ ದೌವನೇಶ್ ತಿಳಿಸಿದರು.

ಶಿಕ್ಷಕರಾದ ರಾಮಾಚಾರಿ, ನಾಗವೇಣಿ ಸೇರಿದಂತೆ ಗ್ರಾಮದ ಪ್ರಮುಖರು ಹಾಗೂ ಶಾಲಾ ಸಿಬ್ಬಂದಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-18-1679087377

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.