ಕೋಲಾರ: ‘ನಮ್ಮ ನಡೆ ಅಸ್ಪೃಶ್ಯತೆ ಮುಕ್ತ ಭಾರತದೆಡೆಗೆ’ ಅಭಿಯಾನ ಕೈಗೊಂಡಿರುವ ಅರಿವು ಭಾರತ ಸಂಸ್ಥೆಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಭಾನುವಾರ ಬೆಳಿಗ್ಗೆ 10.30ಕ್ಕೆ ‘ಬಿಯಾಂಡ್ ಬ್ಯಾರಿಯರ್ಸ್’ ಕೃತಿ ಬಿಡುಗಡೆ ಹಾಗೂ ಅಸ್ಪೃಶ್ಯತೆ ನಿರ್ಮೂಲನೆಯಲ್ಲಿ 12 ವರ್ಷ– ಒಂದು ಅವಲೋಕನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ಪ್ರಜಾಪರಿವರ್ತನೆ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬಿ.ಗೋಪಾಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಎಂ.ಆರ್.ರವಿ ಕೃತಿ ಬಿಡುಗಡೆ ಮಾಡಲಿದ್ದು, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಸುಧಾಮದಾಸ್, ಎಂ.ಎಲ್.ಅನಿಲ್ ಕುಮಾರ್, ಡಿಐಜಿಪಿ ಡಿ.ದೇವರಾಜ್, ದಲಿತ ಮುಖಂಡ ಟಿ.ವಿಜಯಕುಮಾರ್, ಭೀಮಸೇನ ಅಧ್ಯಕ್ಷ ಪಂಡಿತ್ ಮುನಿವೆಂಕಟಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಎನ್.ವಿಜಯಲಕ್ಷ್ಮಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ’ಗ್ರಾಮರತ್ನ’ ಪುರಸ್ಕರೊಂದಿಗೆ ಸಂವಾದ ಹಾಗೂ ಸನ್ಮಾನ ಏರ್ಪಡಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಹೋರಾಟಗಾರರಾದ ಇಂದಿರಾ ಕೃಷ್ಣ, ವಿ.ಗೀತಾ, ಅನಂತ ನಾಯಕ್, ಪಿಟಿಎಂ ಶಿವಶಂಕರ್, ಆಂಜನೇಯರೆಡ್ಡಿ, ಎಚ್.ಕೆ.ವಿವೇಕಾನಂದ, ಮುನಿರಾಜು ಸಂಪಂಗೆರೆ, ಕಸಾಪ ಜಿಲ್ಲಾಧ್ಯಕ್ಷ ಗೋಪಾಲಗೌಡ ಭಾಗವಹಿಸಲಿದ್ದಾರೆ ಎಂದು ಅರಿವು ಭಾರತ ಸಂಸ್ಥೆಯ ಅರಿವು ಶಿವಪ್ಪ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-18-829715721

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.