ವೇಮಗಲ್: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಕಾಲೇಜು ವಾರ್ಷಿಕೋತ್ಸವ ಹಾಗೂ ಎನ್ಸಿಸಿ, ಎನ್ಎಸ್ಎಸ್ ಮತ್ತು ರೆಡ್ ಕ್ರಾಸ್ ಸಮಿತಿಗಳ ಸಮಾರೋಪ ಸಮಾರಂಭ ನಡೆಯಿತು.

ಈ ವೇಳೆ ವೇಮಗಲ್ - ಕುರುಗಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಎಂ.ವೆಂಕಟೇಶ್ ಮಾತನಾಡಿ, ಇಂದಿನ ಯುವ ಸಮೂಹ ತಂತ್ರಜ್ಞಾನವನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ತಾವು ಕಲಿತ ಸಂಸ್ಥೆ ಹಾಗೂ ಪೋಷಕರಿಗೆ ಹೆಮ್ಮೆ ತರುವ ಸಾಧನೆ ಮಾಡಬೇಕೆಂದು ತಿಳಿಸಿದರು.

ಕಾಲೇಜು ದಿನಗಳಲ್ಲಿ ಸಿಗುವ ಮುಕ್ತ ವಾತಾವರಣವನ್ನು ವಿದ್ಯಾರ್ಥಿಗಳು ಜವಾಬ್ದಾರಿಯಿಂದ ಬಳಸಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿನ ಪ್ರತಿಭೆ ಅನಾವರಣಗೊಳಿಸಲು ಇಂತಹ ವಾರ್ಷಿಕೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ವೇದಿಕೆಗಳಾಗಿವೆ ಎಂದರು.

ಪ್ರಾಂಶುಪಾಲ ಪ್ರೊ.ಕೇಶವ ಮೂರ್ತಿ ಮಾತನಾಡಿ, ನಮ್ಮ ಕಾಲೇಜಿನಲ್ಲಿ ‘ಬಿಸಿನೆಸ್ ಡೇಟಾ ಅನಾಲಿಟಿಕ್ಸ್’ (ಬಿಡಿಎ) ಕೋರ್ಸ್ ಅನ್ನು ಪ್ರಾರಂಭಿಸಿಲಾಗಿದೆ. ಪ್ರಸ್ತುತ ಕಾಲೇಜಿನಲ್ಲಿ ಬಿಎ, ಬಿಎಸ್ಸಿ, ಬಿಎಸ್ಡಬ್ಲ್ಯೂ, ಬಿಕಾಂ, ಬಿಬಿಎ, ಬಿಡಿಎ ಸೇರಿದಂತೆ ಪ್ರಮುಖ ಪದವಿ ಕೋರ್ಸ್ಗಳು ಲಭ್ಯವಿದೆ ಎಂದರು.

ಅಧ್ಯಕ್ಷ ನಾಗೇಶ್, ಅನುಷಾ ಮುನಿ ರಾಜು, ಶರಣಪ್ಪ, ಮಧುಸೂದನ್, ಪರಶುರಾಮ, ಸುನಿಲ್ ಕುಮಾರ್, ನಾಗೇಂದ್ರ, ಕಿರಣ್ ಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-18-808885961

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.