ಕೋಲಾರ: ಜಿಲ್ಲೆಯ ಅಲ್ಪಸಂಖ್ಯಾತ ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ ಬಲ ನೀಡುವ ಉದ್ದೇಶದಿಂದ ಹೊಸದಾಗಿ 'ವಕ್ಫ್ ಮಹಿಳಾ ಪಿಯು ಕಾಲೇಜು' ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ತಿಳಿಸಿದರು.

ಜಿಲ್ಲಾಡಳಿತ ಭವನದ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಟ್ಟಡದ ಲಭ್ಯತೆ ಇಲ್ಲ ಎಂಬ ನೆಪವೊಡ್ಡಿ ಶಿಕ್ಷಣವನ್ನು ಮುಂದೂಡಬಾರದು. ಸ್ವಂತ ಕಟ್ಟಡ ಸಿದ್ಧವಾಗುವವರೆಗೆ ನಗರಸಭೆಯ ಸಮುದಾಯ ಭವನ ಅಥವಾ ಸುಸಜ್ಜಿತ ಖಾಸಗಿ ಕಟ್ಟಡವನ್ನಾದರೂ ಬಾಡಿಗೆಗೆ ಪಡೆದು ಶೈಕ್ಷಣಿಕ ಚಟುವಟಿಕೆ ಆರಂಭಿಸಿ ಎಂದು ಅವರು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗಾಜಲದಿನ್ನೆಯ ಮೊರಾರ್ಜಿ ದೇಸಾಯಿ ಮಾದರಿಯ ಸಿಬಿಎಸ್ಇ ಶಾಲೆಯು ಸತತವಾಗಿ ಶೇ 100ರಷ್ಟು ಫಲಿತಾಂಶ ದಾಖಲಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಜಿಲ್ಲೆಯ ಇತರ ಶಾಲೆಗಳು ಇವುಗಳನ್ನು ಮಾದರಿಯಾಗಿಟ್ಟುಕೊಳ್ಳಬೇಕು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಗೌರವಿಸಬೇಕು ಎಂದರು.

ಬಂಗಾರಪೇಟೆ ಹಾಗೂ ಕೆಜಿಎಫ್ ಭಾಗದಲ್ಲಿ ನಿರ್ಮಾಣವಾಗುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಸತಿ ನಿಲಯಗಳ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಮಳೆಗಾಲ ಆರಂಭವಾಗುವ ಮೊದಲೇ ಕಟ್ಟಡಗಳ ಒಳಾಂಗಣ ಕೆಲಸ ಪೂರ್ಣಗೊಳಿಸಿ, ಪೀಠೋಪಕರಣ ಸೇರಿದಂತೆ ಅಗತ್ಯ ಸೌಲಭ್ಯಗಳೊಂದಿಗೆ ಪ್ರವೇಶಾತಿ ಪ್ರಕ್ರಿಯೆ ಆರಂಭಿಸುವಂತೆ ಎಂಜಿನಿಯರಿಂಗ್ ವಿಭಾಗಕ್ಕೆ ತಾಕೀತು ಮಾಡಿದರು.

ಜಿಲ್ಲೆಯಲ್ಲಿ ಶಿಕ್ಷಣ ಹಕ್ಕು ಕಾಯ್ದೆಯನ್ನು (ಆರ್ಟಿಇ) ಉಲ್ಲಂಘಿಸಿ ನಡೆಯುತ್ತಿರುವ ಅನಧಿಕೃತ ಶಾಲೆಗಳ ಪಟ್ಟಿಯನ್ನು ಸಿದ್ಧಪಡಿಸಲು ಬಿಇಒಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕೌಶಲಾಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ತಾಜಾ ಮೀನುಗಳ ಮಾರಾಟಕ್ಕೆ ಅನುಕೂಲವಾಗುವಂತೆ ಪ್ರತಿ ತಾಲ್ಲೂಕಿನಲ್ಲಿ ಮೀನು ಮಾರಾಟ ಮಳಿಗೆ ಸ್ಥಾಪಿಸಲು ನಗರಸಭೆಗಳ ಮೂಲಕ ಜಾಗ ಗುರುತಿಸಿ ಕ್ರಮ ಕೈಗೊಳ್ಳುವಂತೆ ಮೀನುಗಾರಿಕೆ ಇಲಾಖೆಗೆ ನಿರ್ದೇಶನ ನೀಡಿದರು.

ಕ್ಲಾಕ್ ಟವರ್ ಬಳಿ ಇರುವ ಹಳೆಯ ವಕ್ಫ್ ಕಟ್ಟಡವನ್ನು ನವೀಕರಿಸಿ ಅಲ್ಲಿ ಮಾಹಿತಿ ಕೇಂದ್ರ ಮತ್ತು ವಕ್ಫ್ ಕಚೇರಿ ನಡೆಸುವ ಬಗ್ಗೆ ಚರ್ಚಿಸಲಾಯಿತು.

ಜಿಲ್ಲಾ ಸಮಿತಿ ಸದಸ್ಯರಾದ ಶಫಿಕ್ ಅಹಮದ್ ಮತ್ತು ಶಬೀರ್ ಅಹಮದ್, ಸಮುದಾಯದ ಆಸ್ತಿಗಳ ಒತ್ತುವರಿ ತೆರವುಗೊಳಿಸಲು ಮತ್ತು ಮೌಲಾನಾ ಆಜಾದ್ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವಂತೆ ಮನವಿ ಮಾಡಿದರು.

ಸಭೆಯಲ್ಲಿ ಸಮಿತಿ ಸದಸ್ಯರಾದ ಮಹಮದ್ ಪಾಷ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮೈಲಾರಪ್ಪ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಕುಮಾರಸ್ವಾಮಿ, ಡಿಡಿಪಿಐ ಅಲ್ಮಾಸ್ ಪರ್ವೀನ್ ತಾಜ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ರವಿಚಂದ್ರನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾರಾಯಣಸ್ವಾಮಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-18-1698499705

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.