ಕೊಳ್ಳೇಗಾಲ: ಇಲ್ಲಿನ ಲಯನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಶ್ಯಾಮ್ ಕುಮಾರ್ ರಾಜೀನಾಮೆ ನೀಡಿರುವುದು ಖಂಡಿಸಿ ಪೋಷಕರು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕಾಲೇಜು ಮುಂಭಾಗ ಜಮಾಯಿಸಿದ ಪೋಷಕರು ಹಾಗೂ ವಿದ್ಯಾರ್ಥಿಗಳು ಶ್ಯಾಮ್ ಕುಮಾರ್ ರಾಜೀನಾಮೆ ಹಿಂಪಡೆಯಬೇಕು ಎಂದು ಘೋಷಣೆ ಕೂಗಿದರು.

ಕಾಲೇಜಿನ ಆಡಳಿತ ಮಂಡಳಿಯವರು ಉಪನ್ಯಾಸಕ ಶ್ಯಾಮ್ ಕುಮಾರ್ ಅವರ ರಾಜೀನಾಮೆಯನ್ನು ಉದ್ದೇಶ ಪೂರ್ವಕವಾಗಿ ಕೇಳಿದ್ದಾರೆ. ಹಾಗಾಗಿ ಅವರು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಹಿಂಪಡೆಯದೆ ಹೋದರೆ ಮಕ್ಕಳ ಭವಿಷ್ಯ ಹಾಳಾಗುತ್ತದೆ. ಅವರು ಕಾಲೇಜಿನಲ್ಲಿ ಉಪನ್ಯಾಸಕರಾಗಿ ಮುಂದುವರಿಯಬೇಕು ಎಂದು ಒತ್ತಾಯಿಸಿದರು.

ಪೋಷಕರು ಮತ್ತು ಆಡಳಿತ ಮಂಡಳಿ ಸಭೆ: ಕಾಲೇಜು ಆಡಳಿತ ಮಂಡಳಿ ಶ್ಯಾಮ್ ಕುಮಾರ್ ಅವರಿಂದ ರಾಜೀನಾಮೆ ಕೇಳಿಲ್ಲ. ಅವರೇ ರಾಜೀನಾಮೆ ನೀಡಿ ಹೋಗಿದ್ದಾರೆ. ಅವರ ಸ್ಥಾನಕ್ಕೆ ಬೇರೆ ಅಧ್ಯಾಪಕರನ್ನು ನೇಮಿಸುವ ಮೂಲಕ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಿಸಲಾಗುವುದು ಎಂದು ಆಡಳಿತ ಮಂಡಳಿಯವರು ತಿಳಿಸಿದರು.

ಇದಕ್ಕೆ ಒಪ್ಪದ ಪೋಷಕರು ಸಭೆಗೆ ಶ್ಯಾಮ್ ಕುಮಾರ್ ಅವರನ್ನು ಕರೆಯಿಸುವಂತೆ ಒತ್ತಾಯಿಸಿದರು. ಬಳಿಕ ಆಡಳಿತ ಮಂಡಳಿಯವರು, ಬುಧವಾರ ಮತ್ತೆ ಸಭೆ ಕರೆಯಲಾಗುವುದು. ಅಂದಿನ ಸಭೆಗೆ ಉಪನ್ಯಾಸಕರನ್ನು ಕರೆಯಿಸಲಾಗುವುದು ಎಂದು ತಿಳಿಸಿದರು.

ಪೋಷಕರಾದ ಸಿದ್ದಯ್ಯನಪುರ ಚೇತನ್, ಚಾಮರಾಜು, ಕುಮಾರಸ್ವಾಮಿ, ಪೂರ್ಣಿಮಾ, ಜ್ಯೋತಿ, ಗಾಯತ್ರಿ, ಉಮೇಶ್, ರಜಿಯ ಸುಲ್ತಾನ, ಅನಿತಾ, ರಜಿನಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-37-1615360306

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.