ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ): ಇಲ್ಲಿನ ವಿಸ್ಡಮ್ ವಿದ್ಯಾಸಂಸ್ಥೆ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಆರ್ಎಸ್ಎಸ್ ಶಿಬಿರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು, ಸ್ಥಳೀಯರು ಆಕ್ಷೇಪಿಸಿದ್ದು, ಶಿಬಿರವನ್ನು ಸ್ಥಗಿತಗೊಳಿಸಲಾಯಿತು.

ಇದೇ ವೇಳೆ, ‘ಶಾಲಾ ಆವರಣದಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಅವಕಾಶವಿದೆ. ಅನ್ಯ ಚಟುವಟಿಕೆಗಳ ಆಯೋಜನೆಗೆ ಅನುಮತಿ ನೀಡಿಲ್ಲ. ಶಾಲೆ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಬಿಇಒ ಮಂಜುಳಾ ತಿಳಿಸಿದ್ದಾರೆ.

ಶಿಬಿರದಲ್ಲಿ ಯಳಂದೂರು, ಕೊಳ್ಳೇಗಾಲ, ಗ್ರಾಮಾಂತರ ಮತ್ತು ಹನೂರು ತಾಲ್ಲೂಕಿನ 8ನೇ ತರಗತಿಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಿಬಿರವನ್ನು ಮುಂದುವರಿಸದಂತೆ ಪೊಲೀಸರು ಸೂಚನೆ ನೀಡಿದ ಬಳಿಕ ವಿದ್ಯಾರ್ಥಿಗಳು ಸಹಿತ ಎಲ್ಲರೂ ಶಾಲಾ ಆವರಣ ತೊರೆದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-51-1369444658

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.