ಕೊಣನೂರು: ‘ವಿದ್ಯಾರ್ಥಿಗಳು ಆಸೆಗಳಿಗೆ ದಾಹಿಯಾಗದೇ ಜ್ಞಾನಕ್ಕೆ ದಾಹಿಯಾಗಬೇಕು. ನಮ್ಮ ದೇಶದ ಭವಿಷ್ಯ ನಿಂತಿರುವುದೇ ಯುಜ ಸಮುದಾಯದ ಭವಿಷ್ಯದ ಮೇಲೆ’ ಎಂದು ಹೆಬ್ಬಾಳ ಸರ್ಕಾರಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ಹೇಮಚಂದ್ರ ದಾಳಗೌಡನಹಳ್ಳಿ ತಿಳಿಸಿದರು.

ಪಟ್ಟಣದ ಬಿ.ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 2025-26ನೇ ಸಾಲಿನ ಸಹಪಠ್ಯ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಗುರುಗಳ ದರ್ಶನ ಹಾಗೂ ಹಿರಿಯರ ಮಾರ್ಗದರ್ಶನದಿಂದ ನಮಗೆ ಸಿದ್ದಿ ಸಿಗುತ್ತದೆ, ಮಾರ್ಗ, ಜೀವನದ ಮೌಲ್ಯಗಳು ಹಾಗೂ ಜೀವನ ಹೇಗೆ ಎಂಬುದು ತಿಳಿಯುತ್ತದೆ. ವಿದ್ಯಾರ್ಥಿಗಳು ಗುರು, ಹಿರಿಯರಿಗೆ ಗೌರವ ಕೊಡಿ. ವಿದ್ಯಾರ್ಥಿಗಳ ಭವಿಷ್ಯ ಹೇಗಿರುತ್ತದೋ, ಅದರಲ್ಲಿ ನಮ್ಮ ದೇಶದ ಭವಿಷ್ಯ ಅಡಗಿದೆ. ವಿದ್ಯಾರ್ಥಿಗಳು ಉತ್ತಮ ಭವಿಷ್ಯ ತಮ್ಮದಾಗಿಸಿಕೊಳ್ಳುವ ಮೂಲಕ ದೇಶದ ಭವಿಷ್ಯವನ್ನು ಉತ್ತಮ ಪಡಿಸಬೇಕು’ ಎಂದು ತಿಳಿಸಿದರು.

ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಿಡಿಸಿ ಉಪಾಧ್ಯಕ್ಷ ಎಸ್.ಸಿ. ಚೌಡೇಗೌಡ, ‘ವಿದ್ಯಾರ್ಥಿಗಳ ಬದುಕು ಸುಂದರವಾಗಿ ರೂಪಿತವಾಗಬೇಕಾದರೆ ಸಂಸ್ಕಾರವನ್ನು ಶಿಕ್ಷಣದ ಜೊತೆಯಲ್ಲಿ ರೂಢಿಸಿಕೊಳ್ಳಿ’ ಎಂದರು.

ಸಿಡಿಸಿ ಹಿರಿಯ ಸದಸ್ಯ ಕೆ.ಎಸ್. ವಾಸುದೇವ್ ಮಾತನಾಡಿ, ‘ವಿದ್ಯಾರ್ಥಿಗಳು ನೈತಿಕ ಮೌಲ್ಯ, ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳಬೇಕು. ವಿದ್ಯೆಯನ್ನು ಕಲಿಯುವುದಕ್ಕೆ ಅಂತ್ಯವಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಹೆಚ್ಚೆಚ್ಚು ಕಲಿಕೆಗೆ ಒಳಗಾಗಿ. ನನಗಾಗಿ ನಾನು ಎಂದು ಭಾವಿಸದೇ ದೇಶಕ್ಕಾಗಿ ನಾನು ಎಂಬುದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ವಿದ್ಯಾಭ್ಯಾಸ ಮಾಡಿ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ರಾಜೀವ್ ಮಾತನಾಡಿದರು. ಕ್ರೀಡಾ ಸ್ಪರ್ಧೆ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ ವಿದ್ಯಾರ್ಥಿಗಳಿಗೆ ಗೌರವ ಧನ ನೀಡಲಾಯಿತು. ಪಿಎಚ್ಡಿ ಪದವಿ ಗಳಿಸಿದ ಕಾಲೇಜಿನ ಪ್ರಾಧ್ಯಾಪಕ ವಿ.ಡಿ. ಗುರುಪ್ರಸಾದ್ ಅವರನ್ನು ಅಭಿನಂದಿಸಲಾಯಿತು. ಸಿಡಿಸಿ ಸದಸ್ಯ ಕೆ.ಆರ್.ಸುರೇಶ್, ಯೋಗೇಶ್, ಕೆ.ವಿ.ಸತೀಶ್, ಕೆ.ಆರ್. ಸುನಿಲ್ಕುಮಾರ್, ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-36-370931985

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.