ಕೂಡ್ಲಿಗಿ: ಸದಾ ಶೈಕ್ಷಣಿಕ ಚಟುವಟಿಕೆಯಿಂದ ಕೂಡಿರುವ ಸರ್ಕಾರಿ ಶಾಲೆಗಳು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿವೆ ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಹೇಳಿದರು.

ತಾಲ್ಲೂಕಿನ ಗೆದ್ದಲಗಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ, ರಕ್ತದಾನ ಶಿಬಿರ, ಸೆಲ್ಫಿ ಕಾರ್ನರ್ ಹಾಗೂ ಗಿಡ ನೆಡುವ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಗ್ರಾಮೀಣ ಪ್ರದೇಶದ ಮಕ್ಕಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರ ಎರಡು ಕಣ್ಣುಗಳಿದ್ದಂತೆ. ಆದ್ದರಿಂದ ಈ ಎರಡು ಕ್ಷೇತ್ರಕ್ಕೆ ಹೆಚ್ಚು ಅನದಾನ ತಂದು ಅಭಿವೃದ್ಧಿ ಮಾಡಲಾಗಿದೆ. ಸ್ಥಳೀಯವಾಗಿ ಚೆಕ್ ಡ್ಯಾಂ ನಿರ್ಮಾಣ ಮಾಡುವ ಮೂಲಕ ಜನ, ಜಾನುವಾರುಗಳಿಗೆ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲಾಗಿದೆ’ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರು, ಶಿಶು ಅಭಿವೃದ್ಧಿ ಅಧಿಕಾರಿ ಮಾಲುಂಬಿ, ಪರುಶುರಾಮಪ್ಪ, ಸಿದ್ಲಿಂಗಸ್ವಾಮಿ, ಕೊಟ್ರೇಶ್ ಗೌಡ, ಕೆ. ತಿಮ್ಮರೆಡ್ಡಿ, ರಾಮಣ್ಣ, ಚೆನ್ನಣ್ಣ, ನಿರ್ಮಲ, ಜೆ. ಸರೋಜ, ಜಿ. ಪರಿಮಳ, ನಿವೃತ್ತ ಶಿಕ್ಷಕರಾದ ಸಿದ್ದಯ್ಯಸ್ವಾಮಿ, ಜಿ. ರೇವಣ್ಣ, ವಾಸುರಾಮನಾಯ್ಕ್, ನಾಗಪ್ಪ, ತಳವಾರ ಶರಣಪ್ಪ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-25-1267347832

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.