ಕೊಪ್ಪ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2025-26ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್., ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್, ರೇಂಜರ್ಸ್ ಮತ್ತು ರೋವರ್ಸ್, ರೆಡ್ಕ್ರಾಸ್, ರೆಡ್ ರಿಬ್ಬನ್, ಪ್ಲೇಸ್ಮೆಂಟ್ ಸೆಲ್ ಹಾಗೂ ಇತರೆ ಘಟಕಗಳ ಸಮಾರೋಪ ಸಮಾರಂಭ ಕೌರಿ ಪಾರ್ವತಮ್ಮ ಮಂಜಪ್ಪನಾಯ್ಡ್ ಸ್ಮರಣಾರ್ಥ ಬಯಲು ರಂಗ ಮಂದಿರದಲ್ಲಿ ಮಂಗಳವಾರ ನಡೆಯಿತು.

ಕಾಲೇಜು ಪ್ರಾಂಶುಪಾಲ ಪ್ರೊ. ಅನಂತ ಎಸ್. ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಬಿ.ಎಸ್. ಈಶ್ವರಪ್ಪ ಬೆಳ್ಳಾಲೆ ಕಾರ್ಯಕ್ರಮ ಉದ್ಘಾಟಿಸಿದರು.

ಜಾನಪದ ಕಲಾವಿದ ಎಂ.ಕೆ. ಚಂದ್ರಶೇಖರ್ ಮುರೊಳ್ಳಿ ಗಾಯನದ ಮೂಲಕ ವಿದ್ಯಾರ್ಥಿಗಳನ್ನು ರಂಜಿಸಿದರು. ಅಭಿವೃದ್ಧಿ ಸಮಿತಿಯ ಜುಬೇರ್ ಅಹಮದ್, ಅಭಿಲಾಷ್, ಶ್ರೀನಿಧಿ ವಿ.ಟಿ ಮಾತನಾಡಿದರು.

ವಿಶ್ವವಿದ್ಯಾಲಯ ಮಟ್ಟದಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾಲೇಜಿನ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಧನಂಜಯಮೂರ್ತಿ ಜಿ.ಎನ್. ಸ್ವಾಗತಿಸಿದರು. ಹರೀಶ್ ಎಂ.ಆರ್. ವಂದನಾರ್ಪಣೆ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-126-217239220

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.