ಕೊಪ್ಪ: ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗದ (ಪಟ್ಟಣ ಶಾಲೆ) ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ರುದ್ರೇಶ್ ಅವರನ್ನು ಶಾಲಾ ರೋಟರಿ ಭವನದಲ್ಲಿ ಶನಿವಾರ ಬೀಳ್ಕೊಡಲಾಯಿತು.

ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ರಾಘವೇಂದ್ರ ಮಾತನಾಡಿ, ‘ರುದ್ರೇಶ್ ಅವರ ಉತ್ತಮ ಸೇವೆ ಸದಾ ನೆನಪಿನಲ್ಲಿ ಉಳಿಯುತ್ತದೆ. ಶಿಕ್ಷಕ ವೃತ್ತಿಯನ್ನು ಅತ್ಯಂತ ಅಭಿಮಾನದಿಂದ ಮತ್ತು ಪ್ರಾಮಾಣಿಕವಾಗಿ ನಿರ್ವಹಣೆ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ’ ಎಂದರು.

ಕರ್ನಾಟಕ ಪಬ್ಲಿಕ್ ಶಾಲೆ ಕಾರ್ಯಾ ಧ್ಯಕ್ಷ ಶಿವಾನಂದ ಮಾತನಾಡಿ, ರುದ್ರೇಶ್ ಅವರನ್ನು ಮಕ್ಕಳು ಸಹ ಇಷ್ಟ ಪಡುತ್ತಾರೆ ಎಂದರೆ ಅವರಲ್ಲಿ ಅಂತಹ ಗುಣ–ನಡತೆ ಇತ್ತು. ಅವರು ಶಾಲೆಯ ಎಲ್ಲಾ ಶಿಕ್ಷಕರನ್ನು ಸರಿಸಮನಾಗಿ ನೋಡುವ ಮನೋಭಾವ ಬೆಳೆಸಿಕೊಂಡಿದ್ದರಿಂದ ಈ ಶಾಲೆ ಇಷ್ಟು ಪ್ರಗತಿ ಹೊಂದಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಬೀಳ್ಕೊಡುಗೆ ಸ್ವೀಕರಿಸಿ ಮಾತನಾ ಡಿದ ರುದ್ರೇಶ್, ಸರ್ಕಾರಿ ವೇತನಕ್ಕೆ ಸರಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಅದನ್ನು ಸೇವೆ ಅಂದುಕೊಂಡು ಮಾಡಿದೆ ಅಷ್ಟೇ ಹೊರತು ಹೆಚ್ಚಿನದು ಏನು ಇಲ್ಲ. ತಾವೆಲ್ಲರೂ ಅಭಿಮಾನದಿಂದ ಸನ್ಮಾನಿಸಿ, ಬೀಳ್ಕೊಡುಗೆ ನೀಡಿದ್ದು ಸಂತೋಷ ತಂದಿದೆ ಎಂದು ತಿಳಿಸಿದರು.

ಶಾಲೆಯಲ್ಲಿ ಪ್ರತಿವರ್ಷ 7ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗೆ ಪುರಸ್ಕಾರ ನೀಡಲು ₹25 ಸಾವಿರ ದತ್ತಿ ನಿಧಿಯನ್ನು ಈ ಸಂದರ್ಭದಲ್ಲಿ ಶಿಕ್ಷಕ ರುದ್ರೇಶ್ ನೀಡಿದರು.

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಅನಿತಾ, ಸದಸ್ಯರಾದ ಪ್ರಕಾಶ್ ಸಿ.ಎಚ್., ರಶ್ಮಿ, ರವಿ, ಶಿವಶಂಕರ್, ಉಮೇಶ್ ಶೆಟ್ಟಿ, ರವಿ, ವಿಜಯ್, ಸತೀಶ್, ಸಿ.ಕೆ. ಮಾಲತಿ, ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವೆಂಕಟೇಶ್, ಶಶಿಕುಮಾರ್, ಹಫೀಸ್, ಶತಮಾನೋತ್ಸವ ಸಮಿತಿ ಅಧ್ಯಕ್ಷ ಬೇಲಿಹಳ್ಳಿ ಅಶೋಕ್ ರಾವ್, ವಿಕ್ರಮ್ ನಿಗಳೆ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಸಿ. ರಾಜೇಂದ್ರ, ಕಾರ್ಯದರ್ಶಿ ಮಾರುತಿ ಪ್ರಸಾದ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-126-204165469

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.