ಕೊಪ್ಪ: ತಾಲ್ಲೂಕಿನ ಸೂರ್ಯದೇವಸ್ಥಾನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವ ಪ್ರಯುಕ್ತ ಮಕ್ಕಳ ದಾಖಲಾತಿ ಹೆಚ್ಚಿಸುವ ಸಲುವಾಗಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಹೊಸದಾಗಿ ದಾಖಲಾದ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವ ಮೂಲಕ ಶಾಲೆಗೆ ಬರಮಾಡಿಕೊಳ್ಳಲಾಯಿತು. ಪೋಷಕರು ಅಕ್ಕಿಯಲ್ಲಿ ಅಕ್ಷರ ಬರೆಸಿದರು. ಶಿಕ್ಷಕರು ಸ್ಲೇಟ್ಗಳಲ್ಲಿ ಅಕ್ಷರ ಬರೆಸಿದರು.

ಇದೇ ವೇಳೆ ಮಕ್ಕಳಿಗೆ ದಾನಿಗಳಿಂದ ಸಂಗ್ರಹಿಸಿದ ನೋಟ್ ಪುಸ್ತಕ, ಪೆನ್ನು, ಪೆನ್ಸಿಲ್, ಕಾಪಿ ರೈಟಿಂಗ್ ಪುಸ್ತಕ, ಇಲಾಖೆಯಿಂದ ಉಚಿತವಾಗಿ ನೀಡುವ ಸಮವಸ್ತ್ರ, ಪಠ್ಯಪುಸ್ತಕಗಳನ್ನು ವಿತರಿಸಲಾಯಿತು.

ಶಾಲಾ ಆವರಣವನ್ನು ತಳಿರು ತೋರಣಗಳಿಂದ ಅಲಂಕಾರ ಮಾಡಲಾಗಿತ್ತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ್ ಅಧ್ಯಕ್ಷತೆ ವಹಿಸಿದ್ದರು. ಕೆಡಿಪಿ ಸದಸ್ಯ ರಾಜಶಂಕರ್, ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ್ ಮೂರ್ತಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಪ್, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ನಾಗರತ್ನ, ಮುಖ್ಯ ಶಿಕ್ಷಕಿ ಮಲ್ಲಿಕಾ, ಸಹ ಶಿಕ್ಷಕರಾದ ಸುಕೇಶ್ ಎನ್.ಪಿ., ಮೇಘನಾ, ಪ್ರವೀತ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಪೋಷಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-126-1461940039

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.