ಕೊಪ್ಪಳ: ಶಿಕ್ಷಣ ಸಂಸ್ಥೆಗಳಲ್ಲಿ ವಂತಿಕೆ ಹಾವಳಿ ನಿಲ್ಲಿಸಬೇಕು, ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ್ ಪ್ರಾಧಿಕಾರ ರಚಿಸಬೇಕು ಎಂದು ಆಗ್ರಹಿಸಿ ರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಪ್ರಮುಖರು ಗುರುವಾರ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಅವರಿಗೆ ಮನವಿ ಸಲ್ಲಿಸಿದರು.

‘2026-27ನೇ ಸಾಲಿನಲ್ಲಿ ರಾಜ್ಯದಾದ್ಯಂತ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಈಗಾಗಲೇ ಪ್ರವೇಶಾತಿ ಪ್ರಕ್ರಿಯೆ ಮುಕ್ತಾಯಗೊಳಿಸಿದ್ದು, ಜಿಲ್ಲಾ ಶಿಕ್ಷಣ ಪ್ರಾಧಿಕಾರ ಸಭೆ ಸೇರಿ, ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ಕುರಿತು ಪಾಲಕರಿಗೆ ಮಾಹಿತಿ ನೀಡಬೇಕಾಗಿತ್ತು. ಜಿಲ್ಲೆಗಳಲ್ಲಿ ತಮ್ಮ ಅಧ್ಯಕ್ಷತೆಯಲ್ಲಿರುವ ಸಮಿತಿಯು ಸಭೆ ಸೇರಿ ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡದಿರುವ ಕಾರಣ 1983ರ ಶಿಕ್ಷಣ ಕಾಯ್ದೆ ಮತ್ತು 2009ರ ಆರ್.ಟಿ.ಇ ಕಾಯ್ದೆ ಸಂಪೂರ್ಣವಾಗಿ ಉಲ್ಲಂಘನೆ ಮಾಡಲಾಗಿದೆ’ ಎಂದು ಹೇಳಿದರು.

‘ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ ನೇತೃತ್ವದಲ್ಲಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಶಿಕ್ಷಣ ಇಲಾಖೆಯ ಮುಖ್ಯಸ್ಥರು, ಪಾಲಕರು, ವಿದ್ಯಾರ್ಥಿ ಸಂಘಟನೆಯ ಪ್ರತಿನಿಧಿಗಳ ಜಂಟಿ ಸಭೆ ಕರೆಯಬೇಕು, ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿರುವ ಕೇಂದ್ರೀಯ ಶಾಸನ ಜಾರಿಗೆ ತರಬೇಕು. ಶಿಕ್ಷಣ ಸಂಸ್ಥೆಗಳು ಪ್ರತಿ ತಿಂಗಳಿಗೊಮ್ಮೆ ಪಾಲಕರ ಸಭೆ ಕರೆದು ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸುವಂತೆ ನಿರ್ದೇಶಿಸಬೇಕು’ ಎಂದು ಆಗ್ರಹಿಸಿದರು.

ಸಂಘಟನೆಯ ರಾಜ್ಯ ಉಪಾಧ್ಯಕ್ಷ ಗ್ಯಾನೇಶ್ ಕಡಗದ, ಜಿಲ್ಲಾ ಮುಖಂಡ ರಾದ ಯಮನೂರ, ಸಮೀರ್, ನಾಗರಾಜ, ಮೌನೇಶ, ವೆಂಕಟೇಶ್ ಹಾಗೂ ದೇವರಾಜ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-35-917591077

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.