ಕೊಪ್ಪಳ: ‘ಜೀವನದಲ್ಲಿ ಅಲ್ಪತೃಪ್ತಿಯ ಮನೋಭಾವನೆಯಿಂದಾಗಿ ಜಡತ್ವ ಅಂಟಿಕೊಳ್ಳುತ್ತದೆ. ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡಲಾಗದೇ ಹಿಂದುಳಿಯಲು ಜಡತ್ವ ಕಾರಣವಾಗುತ್ತದೆ‘ ಎಂದು ಇನ್ಸೈಟ್ಸ್ ಸಂಸ್ಥೆ ಸಂಸ್ಥಾಪಕ ದಾವಣಗೆರೆಯ ಜಿ.ಬಿ. ವಿನಯಕುಮಾರ್ ಹೇಳಿದರು.

ನಗರದ ಕಾಳಿದಾಸ ಶಿಕ್ಷಣ ಸಂಸ್ಥೆಯಲ್ಲಿ ಇತ್ತೀಚೆಗೆ ಹಾಲುಮತ ಮಹಾಸಭಾ, ಕನಕ ನೌಕರ ಸಂಘದ ವತಿಯಿಂದ ನಡೆದ ಸಮುದಾಯದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಕಾಣುವ ಕನಸುಗಳು ಸದಾ ದೊಡ್ಡದಾಗಿರಬೇಕು. ಆ ಕನಸುಗಳನ್ನು ಬೆನ್ನು ಹತ್ತಿ ನನಸು ಮಾಡಿಕೊಳ್ಳಲು ನಿರಂತರ ಪ್ರಯತ್ನ ಮಾಡಬೇಕು. ವಿಫಲರಾದಾಗ ನಿರಾಶೆಯಾಗದೆ ಮತ್ತೆ ಪ್ರಯತ್ನ ಮುಂದುವರಿಸಿದರೆ ಯಶಸ್ಸು ನಿಶ್ಚಿತ’ ಎಂದು ವಿದ್ಯಾರ್ಥಿಗಳಲ್ಲಿ ಭರವಸೆ ತುಂಬಿದರು.

ಶಾಸಕ ದೊಡ್ಡನಗೌಡ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಕಾಳಿದಾಸ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಭವಿಷ್ಯ ಬೆಳಗುವ ಕೆಲಸ ಮಾಡುತ್ತಿದೆ’ ಎಂದು ಹೇಳಿದರು.

ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ಹನುಮಂತ ಕೌದಿ, ಶಿವಸಿದ್ದೇಶ್ವರ ಸ್ವಾಮೀಜಿ, ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ, ತಾಲ್ಲೂಕು ಅಧ್ಯಕ್ಷ ಮುದ್ದಪ್ಪ ಬೇವಿನಹಳ್ಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರ ಹೊರಪೇಟೆ, ಕೊಪ್ಪಳ ಡಿವೈಎಸ್ಪಿ ಮುತ್ತಣ್ಣ ಸವರಗೋಳ, ಸಿಪಿಐ ಸುರೇಶ ಡಿ, ಪಿಎಸ್ಐ ರೇವಣಸಿದ್ದಪ್ಪ, ಕಿರ್ಲೋಸ್ಕರ್ ಕಂಪನಿಯ ಎಚ್.ಆರ್. ವಿಭಾಗದ ಪ್ರಮುಖ ಶಿವಯ್ಯ, ಎಂಎಸ್ಪಿಎಲ್ ಕಾರ್ಖಾನೆಯ ರಮೇಶ, ಕೊಪ್ಪಳ ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ತುರಾದಿ, ಶಿಕ್ಷಕಿ ಅರುಣಾ ನರೇಂದ್ರ, ಕನಕ ನೌಕರ ಸಂಘದ ಸಿದ್ದಪ್ಪ ಕುರಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-35-1133117978

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.