ಲಕ್ಕುಂಡಿ: ‘ಇಂದಿನ ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲಿ ಶಿಕ್ಷಣಕ್ಕೆ ಹೆಚ್ಚು ಬೆಲೆಯಿದೆ. ಈ ದಿಸೆಯಲ್ಲಿ ಮಕ್ಕಳು ಮೊಬೈಲ್ ಬಳಕೆಯಿಂದ ದೂರವಿದ್ದು ಓದಿನ ಕಡೆ ಹೆಚ್ಚು ಗಮನ ನೀಡಬೇಕು’ ಎಂದು ಕೊಟ್ಟೂರೇಶ್ವರ ಸ್ವಾಮೀಜಿ ಹೇಳಿದರು.

ಇಲ್ಲಿಗೆ ಸಮೀಪದ ಹರ್ಲಾಪುರ ಕೊಟ್ಟೂರೇಶ್ವರ ಮಠದಲ್ಲಿ ನಡೆದ 318ನೇ ಶಿವಾನುಭವದ ಸಾನ್ನಿಧ್ಯ ವಹಿಸಿ ಮಾತನಾಡಿದರು.

‘ಇಂದು ಎಲ್ಲ ಕ್ಷೇತ್ರಗಳಲ್ಲಿ ಕೌಶಲಕ್ಕೆ ಮಹತ್ವವಿದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿ ಕೂಡ ಶಿಕ್ಷಣದ ಜತೆಗೆ ಕೌಶಲ ಕಲಿಯಬೇಕು. ಇದರ ಸಹಾಯದಿಂದ ವೃತ್ತಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ’ ಎಂದು ಅವರು ಹೇಳಿದರು.

‘ಕೌಶಲ ಬೆಳೆಸಿಕೊಳ್ಳಲು ಮಠ, ಮಂದಿರಗಳಲ್ಲಿ ನಡೆಯುವ ಶಿವ ಶರಣರ ತತ್ವ ಹಿತೋಪದೇಶಗಳು ದಾರಿ ದೀಪವಾಗಲಿದೆ’ ಎಂದು ಅವರು ಹೇಳಿದರು .

‘ಮಠದಲ್ಲಿ ಕಳೆದ 25 ವರ್ಷಗಳಿಂದ ಎಸ್ಎಸ್ಎಲ್ಸಿ, ಪಿಯುಸಿ ಸೇರಿದಂತೆ ವಿವಿಧ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸಲಾಗುತ್ತಿದೆ. ಇದು ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ’ ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಭಾಗ್ಯಶ್ರೀ ಯಾಳವಾಡ, ನಿಖಿಲ್ ಕೋರಿ, ಭಾಗ್ಯಲಕ್ಷ್ಮೀ ಶಾನಭೋಗರ, ಜ್ಯೋತಿ ಮನ್ನಾಪೂರ, ಶಿವಶಾಂತ ಶಶಿಮಠ, ಪೂರ್ಣಿಮಾ ಕಾಶಪ್ಪನವರ ಅವರನ್ನು ಸನ್ಮಾನಿಸಲಾಯಿತು.

ಕೆ.ಬಿ.ವೀರಾಪುರ, ನಾಗೇಂದ್ರ ಅರ್ಕಸಾಲಿ ಸಂಗೀತ ಸೇವೆ ನೀಡಿದರು. ಉಪನ್ಯಾಸಕ ವಿ.ಎಚ್.ಕೊಳ್ಳಿ, ಶರಣಪ್ಪಗೌಡ ಪಾಟೀಲ, ಸಿದ್ದು ಯಾಳವಾಡ, ಕೊಟ್ರಯ್ಯ ಮಜ್ಜಿಗುಡ್ಡ, ಕೊಟ್ರಗೌಡ ಕಾತರಕಿ, ಶರಣಪ್ಪ ದೇಸಾಯಿ, ದೇವೇಂದ್ರಪ್ಪ ಜಮಲಿಂಗಪ್ಪನವರ, ಕೆ.ಬಿ.ಕೊಣ್ಣೂರು, ಟಿ.ಡಿ.ಗವಾನಿ, ಪ್ರಕಾಶ ಹೊಸಮನಿ ಇದ್ದರು.

ನಿವೃತ್ತ ಶಿಕ್ಷಕ ರಾಮಣ್ಣ ಬೆಳಧಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೆಂಕಟೇಶ ಜುಂಜಣ್ಣಿ ನಿರೂಪಿಸಿ, ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-23-1341697619

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.