ಕೊಪ್ಪಳ: ‘ಉನ್ನತ ಸಾಧನೆ ಮಾಡಿದವರನ್ನು ಸ್ಫೂರ್ತಿ ಮತ್ತು ಮಾದರಿಯಾಗಿ ತೆಗೆದುಕೊಳ್ಳಬೇಕು’ ಎಂದು ಭಾಗ್ಯನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದ ಚೈತನ್ಯಾನಂದ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಗೊಂಡಬಾಳ ಗ್ರಾಮದಲ್ಲಿ ಮಂಗಳವಾರ ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಿಂದ ಆಯೋಜಿಸಿದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿ ‘ಒಳ್ಳೆಯ ಚಿಂತನೆ ಮತ್ತು ಉತ್ತಮ ಅರೋಗ್ಯ ಇದ್ದರೆ ಎಲ್ಲ ಸಮಸ್ಯೆಗಳು ಪರಿಹಾರ ಆಗುತ್ತವೆ. ಎಲ್ಲರಲ್ಲೂ ಬಹಳಷ್ಟು ಶಕ್ತಿ ಇದೆ. ಅದನ್ನು ಉಪಯೋಗ ಮಾಡಿಕೊಳ್ಳಬೇಕು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಗಣಪತಿ ಲಮಾಣಿ ‘ವಿದ್ಯಾರ್ಥಿಗಳು ತಮ್ಮ ಮನೆ ಮತ್ತು ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕಠಿಣ ಪರಿಶ್ರಮ ಪಟ್ಟರೆ ಖಂಡಿತಾ ಯಶಸ್ಸು ಸಿಗುತ್ತದೆ’ ಎಂದರು.

ಮುಖ್ಯ ಅತಿಥಿಯಾಗಿದ್ದ ಬಿ. ಜಿ ಕರಿಗಾರ, ಕಾಲೇಜಿನ ಪ್ರಾಧ್ಯಾಪಕರಾದ ಮಲ್ಲಿಕಾರ್ಜುನ, ಪ್ರದೀಪ್ ಕುಮಾರ, ಗೊಂಡಬಾಳ ಗ್ರಾಮದ ಮುಖಂಡರಾದ ಸೋಮಶೇಖರಯ್ಯ ವಿರೂಪಾಕ್ಷಯ್ಯ ಇನಾಮದಾರ, ಅದಪ್ಪ ಹಳ್ಳಿಕೇರಿ, ಬಸಣ್ಣ ಕೋಣಿ, ಉಪನ್ಯಾಸಕರಾದ ನರಸಿಂಹ, ಶಿವಪ್ರಸಾದ್ ಹಾದಿಮನಿ, ವಿರೂಪಾಕ್ಷಿ ಮುತ್ತಾಳ, ಶ್ರೀಕಾಂತ್, ಸಂಗಪ್ಪ ಬ್ಯಾಳಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-35-825669

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.