ಕೊಪ್ಪಳ: ‘ವೈದ್ಯಕೀಯ ಸೇವೆ ಬಹಳ ಪವಿತ್ರವಾದದ್ದು, ತೊಂದರೆ ಎಂದು ಬರುವ ರೋಗಿಗಳ ಗುಣಮುಖ ಮಾಡುವ ಸೇವೆ ಶ್ರೇಷ್ಠವಾಗಿದೆ. ಉತ್ತಮ ಅಧ್ಯಯನ ಮಾಡುವುದರ ಮೂಲಕ ಇದರಲ್ಲಿ ಪರಿಣತಿ ಪಡೆಯಲು ಸಾಧ್ಯ’ ಎಂದು ಗವಿಸಿದ್ದೇಶ್ವರ ವಿದ್ಯಾವರ್ಧಕ ಟ್ರಸ್ಟ್ ಕಾರ್ಯದರ್ಶಿ ಡಾ. ಆರ್ ಮರೇಗೌಡ ಹೇಳಿದರು.

ನಗರದ ಗವಿಸಿದ್ದೇಶ್ವರ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ 2025 -26ನೇ ಸಾಲಿನ ಹೊಸ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಗವಿಮಠದ ಅನ್ನ, ಅಕ್ಷರ, ಅರಿವು ಆರೋಗ್ಯ, ಆಧ್ಯಾತ್ಮ ಸೇವೆಗೆ ಶ್ಲಾಘನೆ ವ್ಯಕ್ತಪಡಿಸಿ ವಿದ್ಯಾರ್ಥಿಗಳೇ ಕಾಲೇಜಿನ ಭವಿಷ್ಯ ಎಂದರು.

ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಂಗರಚನ ಶಾಸ್ತ್ರವಿಭಾಗದ ಸಹ ಪ್ರಾಧ್ಯಾಪಕ ಡಾ. ಮಂಜುನಾಥ್ ಎಸ್. ಹಲಗತ್ತಿ ಮಾತನಾಡಿ ‘ತಾವೆಲ್ಲರೂ ಉತ್ತಮ ಅಭ್ಯಾಸದ ಕಡೆಗೆ ಗಮನ ಹರಿಸಬೇಕು. ಉತ್ತಮ ಅಧ್ಯಯನದಿಂದ ಮಾತ್ರ ಓದುವ ಕೋರ್ಸ್ನಲ್ಲಿ ಅನುಭವ ಗಳಿಸಿಕೊಳ್ಳಲು ಸಾಧ್ಯ’ ಎಂದು ಹೇಳಿದರು.

ಗವಿಸಿದ್ದೇಶ್ವರ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಮರ್ಸಿಲ್ ಎಸ್.ಹೂಲಗೇರಿ, ಪ್ಯಾರಾ ಮೆಡಿಕಲ್ ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಪ್ರೊ. ನಾಗರಾಜ ಬೊಮ್ಮನಾಳ, ಸಂಯೋಜಕಿ ಶಿಲ್ಪಾ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-35-102080147

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.