ಕೊಪ್ಪಳ: ‘ಪ್ರತಿಯೊಬ್ಬ ಮಹಿಳೆ ಮಾಸಿಕ ಋತುಚಕ್ರ ಸಂದರ್ಭದಲ್ಲಿ ವೈಯಕ್ತಿಕ ಶುಚಿತ್ವಕ್ಕೆ ಆದ್ಯತೆ ನೀಡಿ ಸ್ಯಾನಿಟೆರಿ ಪ್ಯಾಡ್ ಬಳಕೆಗೆ ಒತ್ತು ನೀಡಬೇಕು’ ಎಂದು ಜಿಲ್ಲಾ ಪಂಚಾಯಿತಿಯ ಸ್ವಚ್ಛ ಭಾರತ ಮಿಷನ್ ಯೋಜನೆಯ ಸಮಾಲೋಚಕಿ ಬಸಮ್ಮ ಹುಡೇದ ಹೇಳಿದರು.

ತಾಲ್ಲೂಕಿನ ಕೆಂಚನಡೊಣಿ ತಾಂಡಾದ ಹತ್ತಿರ ಇರುವ ಡಿ.ಹೊಸಳ್ಳಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಹಮ್ಮಿಕೊಂಡ ಋತುಚಕ್ರ ನೈರ್ಮಲ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಮಹಿಳೆಯರ ವೈಯಕ್ತಿಕ ಶುಚಿತ್ವ ಹಾಗೂ ಸ್ಯಾನಿಟರಿ ಪ್ಯಾಡ್ಗಳ ಬಳಕೆ ಹಾಗೂ ಬಳಸಿದ ಪ್ಯಾಡ್ಗಳನ್ನು ಇನ್ಸಿನರೇಟರ್ ಮೂಲಕ ವೈಜ್ಞಾನಿಕ ನಿರ್ವಹಣೆ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ನಾವು ಆರೋಗ್ಯದ ಬಗ್ಗೆ ಕಾಳಜಿವಹಿಸದೇ ಇರುವದರಿಂದ ಅನಾರೋಗ್ಯಕ್ಕೆ ಒಳಗಾಗುತ್ತಿದ್ದೆವೆ. ಮುಟ್ಟನ್ನು ಗುಟ್ಟನ್ನಾಗಿಸದೇ ಒಗ್ಗೂಡಿಕೊಂಡು ಆರೋಗ್ಯದ ಬದಲಾವಣೆಗೆ ಮುನ್ನುಡಿ ಬರೆಯೋಣ’ ಎಂದರು.

ತಾಲ್ಲೂಕ ಪಂಚಾಯಿತಿ ನರೇಗಾ ಸಹಾಯಕ ನಿರ್ದೇಶಕಿ ಸೌಮ್ಯ.ಕೆ ಮಾತನಾಡಿ, ‘ಕೂಲಿಕಾರರು ತಮ್ಮ ಕೆಲಸದ ಜೊತೆಗೆ ಆರೋಗ್ಯದ ಬಗ್ಗೆ ಕಾಳಜಿವಹಿಸಿ ನೆಮ್ಮದಿ ಜೀವನ ಸಾಗಿಸಬೇಕು’ ಎಂದರು.

ಐಇಸಿ ಸಂಯೋಜಕ ದೇವರಾಜ ಪತ್ತಾರ, ರಾಮಣ್ಣ ಕುಟುಗನಹಳ್ಳಿ, ಲಕ್ಷ್ಮಣ ಹಿರೇಮನಿ, ಯಂಕಮ್ಮ, ಶೇಖಪ್ಪ ಕಾರಬಾರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-35-1301488431

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.