ಕೊಪ್ಪಳ: ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದ್ದು, ಈ ಕೂಡಲೇ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರಿಗೆ ಶಿಕ್ಷೆ ವಿಧಿಸಬೇಕು ಹಾಗೂ ಎನ್ಟಿಎ (ರಾಷ್ಟ್ರೀಯ ಪರೀಕ್ಷಾ ಸಂಸ್ಥೆ) ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಕೊಪ್ಪಳದ ಬಸ್ ನಿಲ್ದಾಣದ ಕನಕದಾಸ ವೃತ್ತದಲ್ಲಿ ಶುಕ್ರವಾರ ಎಐಡಿಎಸ್ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು

ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಒ ರಾಜ್ಯ ಮುಖಂಡ ತುಳಜರಾಮ್ ಎನ್. ಕೆ ಮಾತನಾಡಿ ‘ಪದೇ ಪದೇ ಮರುಕಳಿಸುತ್ತಿರುವ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕೇವಲ ಒಂದು ಪರೀಕ್ಷಾ ಸಂಸ್ಥೆಯ ವೈಫಲ್ಯವಲ್ಲ; ಇದು ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಬೆವರು ಮತ್ತು ಕನಸುಗಳ ಮೇಲೆ ಎಸಗುತ್ತಿರುವ ಘೋರ ದೌರ್ಜನ್ಯವಾಗಿದೆ. ಕೇವಲ ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ ವೈದ್ಯಕೀಯ ಶಿಕ್ಷಣದ ಕನಸು ಹೊತ್ತವರ ಆಶೋತ್ತರಗಳನ್ನು ಅತಿ ಹೆಚ್ಚು ಹಣ ನೀಡುವವರಿಗೆ ಹರಾಜು ಹಾಕಲಾಗಿದೆ’ ಎಂದು ಆರೋಪಿಸಿದರು.

‘ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಕೋಚಿಂಗ್ ಮಾಫಿಯಾದ ಕೈಗೊಂಬೆಯಂತೆ ವರ್ತಿಸುತ್ತಿರುವುದು ಸಂಪೂರ್ಣ ವ್ಯವಸ್ಥೆ ಹದಗೆಟ್ಟ ಸ್ಥಿತಿಯನ್ನು ತೋರಿಸುತ್ತಿದೆ. ಈ ವ್ಯವಸ್ಥೆಯು ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕ ಮತ್ತು ಹತಾಶೆ ಮೂಡಿಸಿದೆ. ಕೇವಲ ಲಾಭಕ್ಕಾಗಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ನಾಶಪಡಿಸುತ್ತಿರುವುದು ಖಂಡನೀಯ ಎಂದರು.

್ರವೇಶ ಪರೀಕ್ಷಾ ಪದ್ಧತಿಯನ್ನು ಅಮೂಲಾಗ್ರವಾಗಿ ಬದಲಿಸಿ ಅದು ಸಾಮಾನ್ಯರಿಗೂ ಲಭ್ಯವಿರುವಂತೆ, ಪಾರದರ್ಶಕವಾಗಿ ಮತ್ತು ಖಾಸಗಿ ವಾಣಿಜ್ಯ ಹಿತಾಸಕ್ತಿಗಳಿಂದ ಮುಕ್ತವಾಗಿರುವಂತೆ ನೋಡಿಕೊಳ್ಳಬೇಕು. ಅನ್ಯಾಯದ ವಿರುದ್ಧ ಹೋರಾಡಲು ಪ್ರತಿಯೊಬ್ಬ ವಿದ್ಯಾರ್ಥಿ ಮತ್ತು ಶಿಕ್ಷಣ ಪ್ರೇಮಿ ಸಮುದಾಯ ಮುಂದೆ ಬರಬೇಕು ಎಂದು ಅವರು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಎಐಡಿಎಸ್ಒ ಜಿಲ್ಲಾ ಸಂಘಟನಾಕಾರರಾದ ಪ್ರದೀಪ್, ಶಾರದ, ಪೋಷಕರಾದ ಸಿದ್ದಲಿಂಗರೆಡ್ಡಿ, ಶರಣು ಗಡ್ಡಿ, ವಿದ್ಯಾರ್ಥಿಗಳಾದ ಅಭಿಷೇಕ್, ಪಲ್ಲವಿ, ಪ್ರತಿಭಾ, ಸ್ಫೂರ್ತಿ, ಸ್ನೇಹಾ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-35-73043358

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.