ಕೊಪ್ಪಳ: ರಾಜ್ಯ ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಜಿಲ್ಲೆಯ 100ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವುದನ್ನು ಖಂಡಿಸಿ ಎಐಡಿಎಸ್ಒ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ಬುಧವಾರ ನಗರದ ಕನಕದಾಸ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಅಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ, ‘ಸರ್ಕಾರ ಬಡಜನರ ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗುವ ಕೆಪಿಎಸ್ ಮಾಗ್ನೆಟ್ ಯೋಜನೆಯನ್ನು ತಂದು ಸುತ್ತಲಿನ ಶಾಲೆಗಳನ್ನು ವಿಲೀನ ಗೊಳಿಸಿ ಮುಚ್ಚಲು ಮುಂದಾಗಿದೆ. ಇದು ಜಿಲ್ಲೆಯ ಜನರನ್ನು ಶೈಕ್ಷಣಿಕವಾಗಿ ಹಿಂದುಳಿಸುವ ಹುನ್ನಾರವಾಗಿದೆ’ ಎಂದರು.

‘ಕೂಡಲೇ ಸರ್ಕಾರ ಮತ್ತು ಸಂಬಂಧಿಸಿದ ಅಧಿಕಾರಿಗಳು ಜಿಲ್ಲೆಯಲ್ಲಿ ಒಂದೇ ಒಂದು ಶಾಲೆಯನ್ನು ಮುಚ್ಚುವುದಿಲ್ಲ ಎಂದು ಆದೇಶ ನೀಡಬೇಕು. ಇಲ್ಲದಿದ್ದರೆ ಬೃಹತ್ ಚಳುವಳಿ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಎಐಡಿಎಸ್ಒ ರಾಜ್ಯ ಸಮಿತಿಯ ಮುಖಂಡ ಸಿಂಧೂ ಕೌದಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ ಕಣವಿ, ಎಐಡಿಎಸ್ಒ ಜಿಲ್ಲಾ ಸಂಚಾಲಕ ಗಂಗರಾಜ, ಶರಣು ಪಾಟೀಲ, ಶಾರದಾ ಗಡ್ಡಿ, ವೀರೇಶ್, ಮಲ್ಲಿಕಾರ್ಜುನ, ಹನುಮಂತಪ್ಪ, ನಾಗರಾಜ ಸುಂಕಾಪುರ, ಸುರೇಶ ಗಡ್ಡಿ, ಮಂಜುನಾಥ್ ಕವಲೂರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-35-136639702

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.