ಕೊಪ್ಪಳ: ‘ಇಂದಿನ ಯುವಕರು ದೇಶಕ್ಕೆ ಏನಾದರೂ ಕೊಡುಗೆ ಸಲ್ಲಿಸುವುದಾದರೆ ನಿಮ್ಮ ಅಕ್ಕಪಕ್ಕದ ಜನರ ಸಂಕಷ್ಟಗಳಿಗೆ ಸ್ಪಂದಿಸಿದರೆ ಸಾಕು ಅದು ದೇಶಕ್ಕೆ ಕೊಡುಗೆ ನೀಡಿದಂತೆ’ ಎಂದು ಭಾರತೀಯ ರೆಡ್ಕ್ರಾಸ್ ಸಂಸ್ಥೆ ಸಭಾಪತಿ ಸೋಮರಡ್ಡಿ ಅಳವಂಡಿ ಹೇಳಿದರು.

ನಗರದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಯುವ ರೆಡ್ ಕ್ರಾಸ್ ಘಟಕ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ರೆಡ್ ಕ್ರಾಸ್ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ‘ಯುವಜನತೆ ಮಾನವೀಯ ಮೌಲ್ಯಗಳೊಂದಿಗೆ ಸುತ್ತಮುತ್ತ ನಡೆಯುವ ಘಟನೆಗಳಿಗೆ ಸ್ಪಂದಿಸಬೇಕು’ ಎಂದರು.

ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದ ಅಧಿಕಾರಿ ಬಸವರಾಜ ಎಸ್.ಎಂ. ಮಾತನಾಡಿ ಭಾರತೀಯ ರೆಡ್ಕ್ರಾಸ್ ಆರಂಭದ ಇತಿಹಾಸದ ದಿನಗಳನ್ನು ನೆನಪಿಸಿಕೊಂಡರು.

ಕಾಲೇಜಿನ ಪ್ರಾಚಾರ್ಯ ಉಷಾದೇವಿ ಹಿರೇಮಠ, ಮುಖ್ಯ ಅತಿಥಿಗಳಾಗಿ ಯು.ಎಸ್ ಸೊಪ್ಪಿಮಠ, ಸೋಮಶೇಖರ್ ರಾಜು ಯು. ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-35-1946985855

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.